Print this page

ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರರ ಬ್ರಹ್ಮರಥೋತ್ಸವ.

 ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರರ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷಗಳ ನಡುವೆ ಅದ್ದೂರಿಯಾಗಿ ನಡೆಯಿತು.

ಕೆ.ಆರ್.ಪೇಟೆ: ತಾಲ್ಲೂಕಿನ ಶರಣಶ್ರದ್ಧಾ ಕೇಂದ್ರವಾದ ಪವಾಡಪುರುಷ ಸ್ವತಂತ್ರ ಸಿದ್ಧಲಿಂಗೇಶ್ವರರು ಜೀವಂತ ಸಮಾಧಿಯಾ ಗದ್ದುಗೆಯಿರುವ ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ಕೆಂಗೇರಿ ಬಂಡೇಮಠದ ಶ್ರೀ ನಿತ್ಯಾನಂದ ಸ್ವಾಮೀಜಿಗಳು, ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಕಾಪನಹಳ್ಳಿ ಗವಿಮಠದ ನೂತನಶ್ರೀಗಳಾದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿಗಳು ಶ್ರೀ ರಥದಲ್ಲಿ ವಿರಾಜಮಾನರಾಗಿದ್ದ ಸ್ವತಂತ್ರ ಸಿದ್ಧಲಿಂಗೇಶ್ವರರ ಉತ್ಸವಮೂರ್ತಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಹಾರನಹಳ್ಳಿ ಕೋಡಿಮಠದ ಡಾ.ಶ್ರೀ ಸದಾಶಿವ ರಾಜೇಂದ್ರ ಶಿವಯೋಗಿಗಳ ಸಹಯೋಗದಲ್ಲಿ ಜಾತ್ರೆಗೆ ಆಗಮಿಸಿದ್ದ ಎಲ್ಲಾ ಭಕ್ತಾಧಿಗಳಿಗೂ ಅನ್ನದಾಸೋಹ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.ಶ್ರೀಮಠದ ಭಕ್ತರ ಎರಡು ಗುಂಪುಗಳ ನಡುವಿನ ಭಕ್ತರ ನಡುವೆ ಗಲಾಟೆ ಗದ್ದಲ ನಡೆಯಬಹುದೆನ್ನುವ ಮಾಹಿತಿಯ ಹಿನ್ನೆಲೆಯಲ್ಲಿ ಗ್ರಾಮಾಂತರ ಪೋಲಿಸರು ಬಿಗಿಪೋಲಿಸ್ ಬಂದೋಬಸ್ತ್ ಏರ್ಪಡಿಸಿದ್ದರು.

ತಾಲ್ಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ವಡ್ಡರಹಳ್ಳಿ ಧನಂಜಯ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಬೂಕಹಳ್ಳಿ ಮಂಜುನಾಥ್, ರಾಜ್ಯ ಬಿಜೆಪಿ ಮುಖಂಡ ಸಿಂದಘಟ್ಟ ಅರವಿಂದ್, ರಾಜಶ್ವನಿರೀಕ್ಷಕಿ ಚಂದ್ರಕಲಾ, ಗ್ರಾಮಲೆಕ್ಕಾಧಿಕಾರಿ ಕೃಷ್ಣೇಗೌಡ, ಮುಖಂಡರಾದ ಬಳ್ಳೇಕೆರೆ ವರದರಾಜೇಗೌಡ, ವಿ.ಡಿ.ದೇವೇಗೌಡ, ತೋಟಪ್ಪಶೆಟ್ಟಿ, ದೊದ್ದನಕಟ್ಟೆ ಪಾಂಡು, ಮನು-ಶರತ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

 

Share this article

About Author

Madhu