ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ಕಿಕ್ಕೇರಿ ಪಟ್ಟಣದಲ್ಲಿ ಮೈತ್ರಿಪಕ್ಷಗಳ ಮುಖಂಡರಿಂದ ರಸ್ತೆ ತಡೆ..ಟಯರ್ ಸುಟ್ಟು ಆಕ್ರೋಶ...ರಾಜಕೀಯ ದುರುದ್ಧೇಶದ ಮೊಕದ್ದಮೆ ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹ
ಕರ್ನಾಟಕ ರಾಜ್ಯದ ಮಾಜಿಸಚಿವ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಕೇಂದ್ರದ ಆದಾಯ ತೆರಿಗೆ ಇಲಾಖೆಯು ಹವಾಲಾ ಹಣ ಪ್ರಕರಣದಲ್ಲಿ ದುರುದ್ದೇಶಪೂರ್ವಕವಾಗಿ ಬಂಧಿಸಿ ತನಿಖೆಗೆ ಸಹಕಾರ ನೀಡಲಿಲ್ಲವೆಂದು ಸುಳ್ಳು ದೂರನ್ನು ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು...
ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿದ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಟಯರ್ ಗಳನ್ನು ಸುಟ್ಟು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಷಾ ಹಾಗೂ ಬಿ ಜೆ ಪಿ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು...
ಕೇಂದ್ರ ಸರ್ಕಾರವು ಕೂಡಲೇ ಇಡಿ ಇಲಾಖೆಗೆ ನಿರ್ದೇಶನ ನೀಡಿ ಡಿ.ಕೆ.ಶಿವಕುಮಾರ್ ಅವರನ್ನು ಬಿಡುಗಡೆಗೊಳಿಸಿ ರಾಜಕೀಯ ದುರುದ್ಧೇಶದಿಂದ ದಾಖಲಿಸಿರುವ ಪ್ರಕರಣವನ್ನು ಕೈಬಿಡಬೇಕು ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಿಕ್ಕೇರಿ ಸುರೇಶ್ ಒತ್ತಾಯಿಸಿದರು.
ದುರುದ್ದೇಶಪೂರ್ವಕವಾಗಿ ಬಂಧಿಸಿ ತನಿಖೆಗೆ ಸಹಕಾರ ನೀಡಲಿಲ್ಲವೆಂದು ಸುಳ್ಳು ದೂರನ್ನು ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು...
ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿದ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಟಯರ್ ಗಳನ್ನು ಸುಟ್ಟು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಷಾ ಹಾಗೂ ಬಿ ಜೆ ಪಿ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು...
ಪಿ ಎಲ್ ಡಿ ಬ್ಯಾಂಕ್ ಮಾಜಿ ಅದ್ಯಕ್ಷ ಹರಳಹಳ್ಳಿ ವಿಶ್ವನಾಥ್ ಮಾತನಾಡಿ ರಾಜ್ಯದ ಒಬ್ಬ ಉತ್ತಮ ನಾಯಕರ ಮೇಲೆ ಬಿ ಜೆ ಪಿ ಸರ್ಕಾರ ದ್ವೇಷ ರಾಜಕಾರಣ ಮಾಡುವುದನ್ನು ಬಿಟ್ಟು ಸರ್ಕಾರವನ್ನು ಉತ್ತಮ ರೀತಿಯಲ್ಲಿ ನೆಡೆಸಲಿ ಎಂದು ಮೋದಿ ಮತ್ತು ಅಮಿತ್ ಷಾ ವಿರುದ್ದ ಆಕ್ರೋಷ ವ್ಯೆಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿ.ಪಂ ಮಾಜಿ ಉಪಾದ್ಯಕ್ಷ ಕೆ ಎಸ್ ಪ್ರಭಾಕರ್, ತಾಲ್ಲೂಕು ಪಂಚಾಯಿತಿ ಉಪಾದ್ಯಕ್ಷ ವಡ್ಡರಹಳ್ಳಿ ರವಿ, ಪಿ ಎಲ್ ಡಿ ಬ್ಯಾಂಕ್ ಮಾಜಿ ಅದ್ಯಕ್ಷ ಅರಳಹಳ್ಳಿ ವಿಶ್ವನಾಥ್, ಸಮಾಜ ಸೇವಕ ಮೊಟ್ಟೆ ಮಂಜು ಮುಖಂಡರಾದ ಕಾಯಿ ಮಂಜೇಗೌಡ, ಶೇಖರ್, ಏಜಸ್ ಪಾಷ, ಕಾಯಿ ಸುರೇಶ್, ಮತ್ತು ನೂರಾರು ಕಾರ್ಯಕರ್ತರು ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿ...
ಪ್ರತಿಭಟನೆಯಲ್ಲಿ ಯಾವುದೇ ತರ ಅಹಿತರಕ ಘಟನೆ ನೆಡೆಯದಂದೆ ಕಿಕ್ಕೇರಿ ಪೋಲೀಸರು
ಸೂಕ್ತ ಬಂದೂ ಬಸ್ತ್ ನೀಡಲಾಗಿತ್ತು.
ಸೂಕ್ತ ಬಂದೂ ಬಸ್ತ್ ನೀಡಲಾಗಿತ್ತು.