ಹಾಸನ: ಶ್ರವಣಬೆಳಗೊಳದಲ್ಲಿ ಸಿನಿಮೀಯ ರೀತಿಯಲ್ಲಿ ವೃದ್ಧೆಯ 50 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾದ ಖದೀಮರು.
ಹೋಬಳಿಯ ದಮ್ಮನಿಂಗಳ ಗ್ರಾಮದ ಕೆಂಗಮ್ಮ ಚಿನ್ನದ ಸರ ಕಳೆದುಕೊಂಡ ವೃದ್ಧೆ.
ಅಪರಿಚಿತ ಓರ್ವ ಮಹಿಳೆ ಹಾಗೂ ಓರ್ವ ಯುವಕನಿಂದ ಕೃತ್ಯ. ಈ ಗ್ಯಾಂಗ್ ನಲ್ಲಿ ಇನ್ನೂ ನಾಲ್ಕೈದು ಜನರಿರುವುದು ಸಿಸಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ.
ರಸ್ತೆಯಲ್ಲಿ ಪರ್ಸ್ ಸಿಕ್ಕಿದೆ ಇಬ್ಬರು ಹಂಚಿಕೊಳ್ಳೋಣ ಎಂದು ಅಪರಿಚಿತ ಮಹಿಳೆ ವೃದ್ಧೆಯನ್ನು ಸಮೀಪದ ಪಾರ್ಕ್ ಗೆ ಕರೆದೊಯ್ದಿದ್ದಾರೆ.
ಆಗ ಅಲ್ಲಿಗೆ ಬಂದ ಅಪರಿಚಿತ ಯುವಕ ನನ್ನ ಪರ್ಸ್ ನಿಮಗೆ ಸಿಕ್ಕಿದೆಯಾ ಎಂದು ಕೇಳಿಕೊಂಡು ಬಂದಿದ್ದಾನೆ. ಆ ಮಾಂಗಲ್ಯದ ಆಣೆ ಮಾಡುವ ನೆಪದಲ್ಲಿ ಚಿನ್ನದ ಸರವನ್ನು ಬಿಚ್ಚಿಸಿಕೊಂಡು ಪರಾರಿಯಾಗಿದ್ದಾರೆ.
ಶ್ರವಣಬೆಳಗೊಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಖದೀಮರ ಪತ್ತೆಗೆ ಬಲೆ ಬಿಸಿದ್ದಾರೆ.