ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 11 ರಿಂದ ಆರಂಭವಾಗಿ ಮೇ 19 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ನವದೆಹಲಿ: ಇನ್ನು ಕಳೆದ ಬಾರಿ ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆದಿದ್ದರೆ, sಈ ಬಾರಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏ.18 ಗುರುವಾರ ಮೊದಲ ಹಂತ ನಡೆದರೆ ಏ.23 ಮಂಗಳವಾರ ಎರಡನೇ ಹಂತದ ಚುನಾವಣೆ ನಡೆಯಲಿದೆ.ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.ಇನ್ನೂ ವಾಟ್ಸಾಪ್ ಗ್ರೂಪ್ ಗಳಲ್ಲಿ ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಒಂದು ವೇಳೆ ನಿಯಮ ಮೀರಿ ವಾಟ್ಸಾಪ್ ಗ್ರೂಪ್ ಗಳಲ್ಲಿ ಎಲೆಕ್ಷನ್ ಪ್ರಚಾರ ನಡೆಸಿದ್ರೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆಯೋಗ ಎಚ್ಚರಿಕೆ ನೀಡಿದೆ.
ಚುನಾವಣಾ ಆಯೋಗದ ಹೆಲ್ಪ್ ಲೈನ್ ಸಂಖ್ಯೆ '1950' ದಿನದ 24 ಗಂಟೆಗಳ ಕಾಲವೂ ಕಾರ್ಯ ನಿರ್ವಹಿಸಲಿದೆ. ಅಭ್ಯರ್ಥಿಗಳು ನೀತಿ ಸಂಹಿತೆ ಉಲ್ಲಂಘಿಸಿದ್ರೆ ಮೊಬೈಲ್ ಮೂಲಕ ದೂರು ನೀಡಬಹುದು. ಮಾಹಿತಿ ನೀಡಿದವರ ವಿವರ ಗೌಪ್ಯವಾಗಿರಿಸಲಾಗುವುದು. ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆ ಕುರಿತು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು ಎಂದು ಹೇಳಿದ್ದಾರೆ.ಇನ್ನು ಪಾನ್ ಕಾರ್ಡ್ ನಂಬರ್ ನಮೂದಿಸದಿದ್ದರೆ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಲಾಗುವುದು. ದಿವ್ಯಾಂಗರು ಮತ ಚಲಾಯಿಸಲು ವೀಲ್ ಚೇರ್ ವ್ಯವಸ್ಥೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ತಲಾ 14 ಕ್ಷೇತ್ರಗಳಿಗೆ 2 ಹಂತಗಳಲ್ಲಿ ಮತದಾನ ನಡೆಯಲಿದೆ.