ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಯಲ್ಲಿನ ಶೀಘ್ರಲಿಫಿಗಾರರ ಮತ್ತು ಬೆರಳಚ್ಚುಗಾರರ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ.
ಹುದ್ದೆಗಳ ಸಂಖ್ಯೆ : 20
ಶೀಘ್ರಲಿಫಿಗಾರರ – 08
ಬೆರಳಚ್ಚುಗಾರರ – 12
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಅಥವಾ ಇದಕ್ಕೆ ಸಮನಾದ ವಿದ್ಯಾರ್ಹತೆಯಲ್ಲಿ ಉತ್ರ್ತೀಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಪ್ರೌಡ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಕ್ಕೆ ನಿಗದಿಮಾಡಲಾಗಿದ್ದು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ, ಪ.ಪಂ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-07-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ http://ecourts.gov.in/