Print this page

18ವರ್ಷ ತುಂಬಿರುವ ಯುವಕ ಯುವತಿಯರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು

18ವರ್ಷ ತುಂಬಿರುವ ಯುವಕ ಯುವತಿಯರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ತಹಶೀಲ್ದಾರ್ ಎಂ. ಶಿವಮೂರ್ತಿ ಮನವಿ...ಕೆ.ಆರ್.ಪೇಟೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಜಾಗೃತಿ ಜಾಥಾ ನಡೆಸಿ ಜನಸಾಮಾನ್ಯರಿಗೆ ಅರಿವು ಮೂಡಿಸಿದ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಕಛೇರಿಯ ಸಿಬ್ಬಂಧಿಗಳು...

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಕೃಷ್ಣರಾಜಪೇಟೆ ತಾಲ್ಲೂಕು ಆಡಳಿತದ ವತಿಯಿಂದ ಮತದಾರರ ಪಟ್ಟಿಯ ಪರಿಷ್ಜರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ 18ವರ್ಷ ತುಂಬಿರುವ ಯುವಕ, ಯುವತಿಯರು ಹೊಸದಾಗಿ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೊಂದಾಯಿಸಲು ಹಾಗೂ ಮತದಾರರ ಪಟ್ಟಿಯಲ್ಲಿನ ವಿಳಾಸದ ವ್ಯತ್ಯಾಸ, ತಿದ್ದುಪಡಿ ಸೇರಿದಂತೆ ಇತರೆ ವಿಚಾರಗಳಿಗೆ ತಮ್ಮ ಸಮೀಪದ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಅಥವಾ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸಬೇಕು ಎಂದು ತಹಶೀಲ್ದಾರ್ ಎಂ. ಶಿವಮೂರ್ತಿ ಮನವಿ ಮಾಡಿದರು... ಕೃಷ್ಣರಾಜಪೇಟೆ ಪಟ್ಟಣದ ಪ್ರವಾಸಿ ಮಂದಿರದ ಬಳಿಯಿಂದ ಎಂ.ಕೆ.ಬೊಮ್ಮೇಗೌಡ ವೃತ್ತದವರೆಗೆ ನಡೆದ ಜಾಗೃತಿ ಜಾಥಾದಲ್ಲಿ ತಹಶೀಲ್ದಾರ್ ಎಂ. ಶಿವಮೂರ್ತಿ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ಪುರಸಭೆ ಮುಖ್ಯಾಧಿಕಾರಿ ಸತೀಶಕುಮಾರ್, ಸಿಡಿಪಿಓ ದೇವಕುಮಾರ್, ಬಿಇಓ ಎಸ್.ರೇವಣ್ಣ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು , ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕರು, ಬೂತ್ ಮಟ್ಟದ ಅಧಿಕಾರಿಗಳು, ಶಿಕ್ಷಕರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪುರಸಭೆ ಸಿಬ್ಬಂಧಿಗಳು ಹಾಗೂ ಕಂದಾಯ ಇಲಾಖೆಯ ನೌಕರರು ಜಾಥಾದಲ್ಲಿ ಭಾಗವಹಿಸಿದ್ದರು.. ‌‌

Share this article

About Author

Super User