Print this page

ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶ್ರಮದಾನ ಶಿಬಿರ

ಕೃಷ್ಣರಾಜಪೇಟೆ ತಾಲ್ಲೂಕಿನ ಮಾಕವಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶ್ರಮದಾನ ಶಿಬಿರಕ್ಕೆ ಚಾಲನೆ..

ಶಿಬಿರವನ್ನು ಭತ್ತದ ದಾನ್ಯದ ರಾಶಿಪೂಜೆ ಮಾಡಿ ಚಾಲನೆ ನೀಡಿದ ಜಿ.ಪಂ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು ಮತ್ತು ಅತಿಥಿಗಳು... ಯುವಜನರು ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಗ್ರಾಮಸ್ವರಾಜ್ಯದ ಕನಸನ್ನು ನನಸು ಮಾಡಲು ಪಣತೊಡಬೇಕು. ಗ್ರಾಮೀಣ ಪ್ರದೇಶದ ಮುಗ್ಧ ಜನರಿಗೆ ವಯಕ್ತಿಕ ಸ್ವಚ್ಛತೆ ಸೇರಿದಂತೆ ಅರಿವಿನ ಜಾಗೃತಿಯನ್ನು ಮೂಡಿಸಬೇಕು. ಸರ್ಕಾರದ ಯೋಜನೆಗಳ ಫಲವು ಗ್ರಾಮೀಣ ಜನರಿಗೆ ತಲುಪುವಂತೆ ಹಾಗೂ ಕೇಳಿ ಪಡೆದುಕೊಳ್ಳುವಂತೆ ಅರಿವಿನ ಬೆಳಕಿನ ಹಣತೆಯನ್ನು ಹಚ್ಚಬೇಕು ಎಂದು ಮಂಜು ಮನವಿ ಮಾಡಿದರು...ಪ್ರಾಂಶುಪಾಲ ಡಾ.ಜಾನೇಗೌಡ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ಮಾಕವಳ್ಳಿ ಗ್ರಾ.ಪಂ ಅಧ್ಯಕ್ಷ ಬಲರಾಮೇಗೌಡ, ಮಾಜಿಅಧ್ಯಕ್ಷ ಮಂಜುನಾಥ್, ಪುರಸಭೆ ಸದಸ್ಯ ಕೆ.ಎಸ್.ಸಂತೋಷ, ಮುಖಂಡರಾದ ಯೋಗೇಶ್, ಸುಗಂಧರಾಜು, ಕಾಂತಾಮಣಿ, ಹಾಲಿನ ಡೈರಿ ಅದ್ಯಕ್ಷ ರವಿ, ಪಿಡಿಓ ಶಿವಕುಮಾರ್, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಡಾ.ಕೆ.ಆರ್.ನೀಲಕಂಠ, ಸರ್ಕಾರಿ ಪ್ರಥಮದರ್ಜೆ ಕಾಲೇಜು ಅಧೀಕ್ಷಕ ಬಿ.ಎ.ಮಂಜುನಾಥ್ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು....

Share this article

About Author

Super User