Print this page

ಕೃಷ್ಣರಾಜಪೇಟೆ ತಾಲ್ಲೂಕಿನ ತ್ರೈಮಾಸಿಕ ಕಾರ್ಯಕ್ರಮಗಳ ಅನುಷ್ಠಾನ ಕುರಿತ ಪ್ರಗತಿ

ಕೃಷ್ಣರಾಜಪೇಟೆ ತಾಲ್ಲೂಕಿನ ತ್ರೈಮಾಸಿಕ ಕಾರ್ಯಕ್ರಮಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯು ಶಾಸಕ ಡಾ.ನಾರಾಯಣಗೌಡ ರ ಅಧ್ಯಕ್ಷತೆಯಲ್ಲಿ

ಕೆ.ಆರ್.ಪೇಟೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಿತು...ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬೇಜವಾಬ್ದಾರಿ ತನವನ್ನು ಪ್ರದರ್ಶನ ಪ್ರದರ್ಶಿಸುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಶಾಸಕರು ತಾಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ, ಜಿಲ್ಲಾ ಪಂಚಾಯತ ಗ್ರಾಮೀಣ ಕುಡಿಯುವ ನೀರು ವಿಭಾಗದ ಎಇಇ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆದಷ್ಟು ಜಾಗ್ರತೆ ಲೋಕಾರ್ಪಣೆಗೊಳಿಸಿ ಶುದ್ಧ ಕುಡಿಯುವ ನೀರಿನ ಘಟಕಗಳ ಮೂಲಕ ಜನಸಾಮಾನ್ಯರಿಗೆ ಕುಡಿಯುವ ನೀರನ್ನು ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು... ಜಿ.ಪಂ ಉಪಾಧ್ಯಕ್ಷೆ ಗಾಯತ್ರಿ, ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಸದಸ್ಯರಾದ ರಾಮದಾಸ್, ಬಿ.ಎಲ್.ದೇವರಾಜು, ತಾ.ಪಂ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷ ರವಿ, ಸ್ಥಾಯಿಸಮಿತಿ ಅಧ್ಯಕ್ಷ ರಾಜು ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಶಾಸಕರಿಗೆ ಅಗತ್ಯ ಮಾಹಿತಿ ನೀಡಿದರು...

Last modified on 08/03/2019

Share this article

About Author

Super User