Print this page

ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ.

 ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ವೇತನ ಬಿಡುಗಡೆಗೆ ಆಗ್ರಹಿಸಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮಂಡ್ಯ ಜಿಲ್ಲೆಯ ಕೆ.ಅರ್.ಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ವೇತನ ಬಿಡುಗಡೆಗೆ ಆಗ್ರಹಿಸಿ ತಾಲೂಕು ಘಟಕದ ಅಧ್ಯಕ್ಷ ಮೋದೂರು ನಾಗರಾಜು ನೇತೃತ್ವದಲ್ಲಿ ಧರಣಿ ನಡೆಸಿ ಕಳೆದ ಹತ್ತಾರು ತಿಂಗಳಿನಿಂದ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ನೀಡದ ಸರಕಾರದ ಹಾಗೂ ಗ್ರಾಮ ಪಂಚಾಯಿತಿ ಪಿಡಿಓಗಳ ನಿರ್ಲಕ್ಷ್ಯವನ್ನು ಖಂಡಿಸಿದರು.ಸಂಬಳ ನೀಡದೇ ಇರುವ ಕಾರಣ ಜೀವನ ನಡೆಸಲು ಕಷ್ಟಕರವಾಗುತ್ತಿದೆ. ಮಕ್ಕಳ ವಿದ್ಯಾಭ್ಯಾಕ್ಕೆ ತೊಂದರೆಯಾಗುತ್ತಿದೆ. ಜೀವನ ನಿರ್ವಹಣೆಗಾಗಿ ಬಡ್ಡಿ ಸಾಲ ತರಬೇಕಾದ ಸ್ಥಿತಿ ನಿರ್ಮಾಣವಾಗಿದೆ ಹಾಗಾಗಿ ಕೂಡಲೇ ಕಳೆದ 10 ರಿಂದ 15 ತಿಂಗಳಿನಿಂದ ಬಾಕಿ ಇರುವ ಎಲ್ಲಾ ವೇತನವನ್ನು ಕೂಡಲೇ ಬಿಡುಗಡೆ ಮಾಡಿ ಅನುಕುಇಲ ಮಾಡಿಕೊಡಬೇಕೆಂದು ನಾಗರಾಜು ಸರಕಾರವನ್ನು ಒತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಕೆ.ಕುಮಾರ್, ಕಾರ್ಯದರ್ಶಿ ನಂಜಯ್ಯ, ಖಜಾಂಚಿ ರಾಮಕೃಷ್ಣ ಮೂರ್ತಿ, ಗೌರವಾಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ವೆಂಕಟೇಶ್, ಸಹ ಕಾರ್ಯದರ್ಶಿಗಳಾದ ರವಿ, ಗಿರೀಶ್, ಕೃಷ್ಣ ಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this article

About Author

Madhu