Print this page

ಸಿದ್ದರಾಮಯ್ಯ ಹುಟ್ಟು ಹಬ್ಬದ ಅಂಗವಾಗಿ ಕೆ.ಆರ್.ಪೇಟೆ ಕಾಂಗ್ರೆಸ್ ಕಾರ್ಯಕರ್ತರ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ.

ಮಾಜಿ ಮುಖ್ಯಮಂತ್ರಿ ಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ ಮಾಡಿದರು.ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕೆ.ಬಿ.ಚಂದ್ರಶೇಖರ್ ಅವರು ನಮ್ಮೆಲ್ಲರ ನಾಯಕರರಾದ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಉತ್ತಮ ಆಡಳಿತ ನಡೆಸುವ ಮೂಲಕ ರಾಜ್ಯದ ಜನರ ಕಣ್ಮಣಿಯಾಗಿದ್ದಾರೆ. ಮುಂದೆ ದೇಶದ ಪ್ರಧಾನಿಯಾಗುವ ಅವಕಾಶ ಒದಗಿ ಬರಲಿ . ಶ್ರೀಯುತರಿಗೆ ದೇವರು ಮತ್ತು ಆರೋಗ್ಯ, ಅವಕಾಶಗಳನ್ನು ನೀಡಲಿ ನೂರ್ಕಾಲ ಬಾಳಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ರವೀಂದ್ರ ಬಾಬು, ಕೆಯುಐಡಿಎಫ್ ಸಿ ನಿಗಮದ ಅಧ್ಯಕ್ಷ ಎಂ.ಡಿ.ಕೃಷ್ಣ ಮೂರ್ತಿ, ಜಿ.ಪಂ. ಸದಸ್ಯ ದೇವರಾಜು, ಕಾಂಗ್ರೆಸ್ ಮುಖಂಡರಾದ ಬಿ.ನಾಗೇಂದ್ರಕುಮಾರ್, ಎಸ್.ಅಂಬರೀಷ್, ಕೆ.ಸಿ.ಮಂಜು ನಾಥ್, ಡಿ.ಪ್ರೇಮಕುಮಾರ್, ಎಂ.ಜೆ.ಶಶಿಧರ್, ಶಿವಣ್ಣ, ರಾಜಯ್ಯ, ಕಿರಣ್ ಕುಮಾರ್, ಹೊಸೂರು ನಿಂಗೇಗೌಡ , ಲಕ್ಷ್ಮೀಪುರ ಚಂದ್ರೇಗೌಡ, ಅಗ್ರಹಾರ ಕುಮಾರ್, ಇತರರು ಇದ್ದರು.

Share this article

About Author

Madhu