ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಅರಿವಿನ ಜಾಗೃತಿ ಕಾರ್ಯಕ್ರಮ
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂದೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಅರಿವಿನ ಜಾಗೃತಿ ಕಾರ್ಯಕ್ರಮ ನಡೆಸಿದರು 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರಿಗೆ ಮತ್ತು ಹುತಾತ್ಮ ಯೋಧರು ಹಾಗೂ ಗಡಿ ಕಾಯುತ್ತಿರುವ ಯೋಧರಿಗಾಗಿ ಅರ್ಪಿಸುವ ಬೃಹತ್ ರಕ್ತದಾನ ಹಾಗೂ 71 ಹಣ್ಣಿನಗಿಡ ವಿತರಣ ಕಾರ್ಯಕ್ರಮ ಆಗಸ್ಟ್ 15 ರಂದು ನಡೆಯಲಿದ್ದು ಪ್ರತಿಯೊಬ್ಬರು ಸ್ವಂಪೇರಿತರಾಗಿ ಭಾಗವಹಿಸುವಂತೆ ಅಖಿಲ ಭಾರತ ಜನವಾದಿ ಮಹಿಳೆ ಸಂಘಟನೆ ಜಿಲ್ಲಾಧ್ಯಕ್ಷೆ ದೇವಿ ಕರೆ ನೀಡಿದರು. ಅರಿವಿನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ , ಮಹಿಳೆ ಯರು ರಕ್ತದಾನ ಮಾಡುವ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ತಪ್ಪು ಮಾಹಿತಿಯಾಗಿದ್ದು, ಮಹಿಳೆಯರು ರಕ್ತದಾನ ಮಾಡಿದರೆ ಹೃದಯರೋಗ , ಹಾಗೂ ಎಲ್ಲಾ ಕಾಯಿಲೆಯಿಂದ ದೂರ ಉಳಿಯವುದು ಎಂದರು.ಕಾರ್ಯಕ್ರಮದಲ್ಲಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸುಶೀಲಾ , ಸುನೀತಾ .ಪದ್ಮ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.