ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾಕಲ್ಯಾಣ ಫಲಾನುಭವಿಗಳಿಗೆ ಶಾಸಕ ನಾರಾಯಣಗೌಡ ಕೊಳವೆಬಾವಿ ಸಾಮಗ್ರಿಗಳನ್ನು ವಿತರಣೆ ಮಾಡಿದರು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾಕಲ್ಯಾಣ ಫಲಾನುಭವಿಗಳಿಗೆ ಶಾಸಕ ನಾರಾಯಣಗೌಡ ಕೊಳವೆಬಾವಿ ಸಾಮಗ್ರಿಗಳನ್ನು ವಿತರಣೆ ಮಾಡಿದರು.ಬಳಿಕ ಮಾತನಾಡಿದ ಅವರು ದಲಿತ ಬಂಧುಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯ ದಿಕ್ಕಿನಲ್ಲಿ ಸಾಗಬೇಕು. ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಉಪಾಧ್ಯಕ್ಷೆ ಗಾಯಿತ್ರಿರೇವಣ್ಣ, ಜೆಡಿಎಸ್ ಮುಖಂಡರಾದ ಕೆಟಿ.ಗಂಗಾಧರ್, ಕೃಷ್ಣೇಗೌಡ, ಮರೀಗೌಡ, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಹೇಮಂತ್ ಕುಮಾರ್, ಉಪಾಧ್ಯಕ್ಷ ಹನುಮಂತು, ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ ಶ್ರೀಧರ್ ಸಿರಿವಂತ, ಬಂಡಿಹೊಳೆ ಕೃಷ್ಣಮೂರ್ತಿ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.