ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮ ಪಂಚಾಯತಿ ನೂತನ ಉಪಾದ್ಯಕ್ಷರಾಗಿ ಸೊಳ್ಳೇಪುರ ಜಯರಾಮು ಅವಿರೋಧವಾಗಿ ಆಯ್ಕೆಯಾದರು.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಾಗಣ್ಣ ರಾಜೀನಾಮೆಯಿಂದ ತೇರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಯಾರು ಸ್ಪರ್ಧಿಸದ ಕಾರಣ ಸೊಳ್ಳೆಪುರ ಜಯರಾಮು ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅದ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ರವರು ಸೇರಿದಂತೆ ನೂರಾರು ಜನ ನೂತನ ಉಪಾದ್ಯಕ್ಷರಿಗೆ ಶುಭಕೋರಿದರು.ಈ ಸಂದರ್ಭದಲ್ಲಿ ಕಿಕ್ಕೇರಿ ಪಟ್ಟಣದ ಜನತೆ ಸಿಹಿ ವಿತರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಯಾದ ಇಓ ಚಂದ್ರಮೌಳಿ, ಗ್ರಾಮ ಪಂಚಾಯಿತಿ ಪಿ ಡಿ ಓ ಕೆಂಪೇಗೌಡ, ಅದ್ಯಕ್ಷರಾದ ಮಹದೇವಮ್ಮ, ನಾಗಣ್ಣ, ಚಂದ್ರಶೇಖರ್, ಮಣೀಶ್, ರಾಜೇಶ್ ಸೇರಿದಂತೆ ಎಲ್ಲಾ ಸದಸ್ಯರು ಹಾಜರಿದ್ದರು.