ಕೆ.ಆರ್.ಪೇಟೆ ತಾಲ್ಲೂಕು ಪಂಚಾಯಿತಿಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎಸ್.ರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕು ಪಂಚಾಯಿತಿಯ ಸ್ಥಾಯಿ ಸಮಿತಿಯ ಈ ಹಿಂದಿನ ಅಧ್ಯಕ್ಷರಾಗಿದ್ದ ಎಂ.ಎನ್.ವಿಜಯಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೆಚ್.ಎಸ್.ರಾಜು ಅವರು ಅವಿರೋಧವಾಗಿ ಆಯ್ಕೆಯಾದರು.ನಂತರ ನೂತನ ಅಧ್ಯಕ್ಷ ರಾಜು ಅವರು ಮಾತನಾಡಿ ನನ್ನನ್ನು ಗುರುತಿಸಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅದ್ಯಕ್ಷ ಸ್ಥಾನ ನೀಡಿರುವ ಶಾಸಕ ನಾರಾಯಣಗೌಡ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು, ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಟಿ.ಮಂಜು, ಹಾಗೂ ಎಲ್ಲಾ ತಾಲ್ಲೂಕು ಪಂಚಾಯಿತಿ ಸದಸ್ಯರಿಗೂ ಆಬಾರಿಯಾಗಿದ್ದೇನೆ. ನನಗೆ ಸಿಕ್ಕಿರುವ ಅಧಿಕಾರವನ್ನು ಸದುಪಯೋಗ ಪಡಿಸಿಕೊಂಡು ಉತ್ತಮವಾಗಿ ಕೆಲಸ ಮಾಡುವ ಮೂಲಕ ಒಳ್ಳೆಯ ಹೆಸರು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದು ರಾಜು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಾನಕೀರಾಂ, ಇಒ ಚಂದ್ರಮೌಳಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಅಭಿನಂದಿಸಿದರು.