ಕೆ.ಆರ್.ಪೇಟೆ: ಮಾರ್ಚಿ 11ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಜೆಡಿಎಸ್ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿರುವ ಕರ್ನಾಟಕದ ಯುವರಾಜ, ಯುವಜನರ ಆಶಾಕಿರಣ ನಿಖಿಲ್ ಕುಮಾರಸ್ವಾಮಿ ಯವರು ಕೆ.ಆರ್.ಪೇಟೆ ತಾಲ್ಲೂಕು ಸಾಸಲು ಗ್ರಾಮದ ಶಂಭುಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಶಾಸಕರಾದ ಶ್ರೀ ನಾರಾಯಣಗೌಡರ ನೇತೃತ್ವದಲ್ಲಿ ನಡೆಯುವ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪುಟ್ಟರಾಜು, ಶಾಸಕಿ ಅನಿತಾಕುಮಾರಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಡಿ. ರಮೇಶ್ ಸೇರಿದಂತೆ ಜೆಡಿಎಸ್ ನಾಯಕರು, ಜಿಲ್ಲಾ ಪಂಚಾಯಿತಿ ಸದಸ್ಯರು, ಮಾಜಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರುಗಳು, ಮಾಜಿ ಸದಸ್ಯರು, ಪುರಸಭೆ ಸದಸ್ಯರು, ಮಾಜಿ ಸದಸ್ಯರು,ಎಪಿಎಂಸಿ ಸದಸ್ಯರು, ಮಾಜಿ ಸದಸ್ಯರು, ಟಿಎಪಿಸಿಎಂಎಸ್ ಸದಸ್ಯರು, ಮಾಜಿ ಸದಸ್ಯರು, ಪಿ.ಎಲ್ ಡಿ ಬ್ಯಾಂಕ್ ನಿರ್ದೇಶಕರು, ಮಾಜಿ ನಿರ್ದೇಶಕರು, ಗ್ರಾಮ ಪಂಚಾಯಿತಿ ಸದಸ್ಯರು, ಮಾಜಿ ಸದಸ್ಯರು, ಎಂಪಿಸಿಎಸ್ ಸದಸ್ಯರು, ಮಾಜಿ ಸದಸ್ಯರು, ವಿಎಸ್ ಎಸ್ ಎನ್ ಸದಸ್ಯರು, ಮಾಜಿ ಸದಸ್ಯರು, ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶಾಸಕ ಡಾ.ನಾರಾಯಣಗೌಡ ಮನವಿ ಮಾಡಿದ್ದಾರೆ.
Last modified on 10/03/2019Article content
ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಂದ ಪ್ರಚಾರ ಆರಂಭ.
ತಾಲೂಕಿನ ಸಾಸಲು ಪುಣ್ಯಕ್ಣೇತ್ರದಿಂದ ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಂದ ಪ್ರಚಾರ ಆರಂಭ.ಶ್ರೀ ಶಂಭುಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚಿಸಿ ರಣಕಹಳೆ ಮೊಳಗಿಸಲಿರುವ ನಿಖಿಲ್ ಕುಮಾರಸ್ವಾಮಿ....
Leave a comment
Write your comments