Print this page

ಹೇಮಾವತಿ ನದಿಯ ಪ್ರವಾಹದ ಭೀತಿಯ ಹಿನ್ನೆಲೆಯಲ್ಲಿ

ಹೇಮಾವತಿ ನದಿಯ ನಡದಲ್ಲಿ ಗುಡಿಸಲು ಹಾಕಿಕೊಂಡು ವಾಸವಾಗಿದ್ದ ಮೀನುಗಾರರ ಕುಟುಂಬವನ್ನು ಹೇಮಾವತಿ ನದಿಯ ಪ್ರವಾಹದ ಭೀತಿಯ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರು ಸ್ಥಳಾಂತರಗೊಳಿಸಿದರು...ಹೇಮಾವತಿ ನದಿಗೆ 1,0008ಸಾವಿರ ಕ್ಯೂಸೆಕ್ಸ್ ನೀರನ್ನು ಗೊರೂರು ಜಲಾಶಯದಿಂದ ಹರಿಯಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಯಿತು...

ಈ ದಿನ ಮಂಡ್ಯ ಜಿಲ್ಲಾಧಿಕಾರಿಗಳಾದ ಶ್ರೀ ವೆಂಕಟೇಶ್ ಅವರು ಕಿಕ್ಕೇರಿ ಪೊಲೀಸ್ ಠಾಣಾ ಸರಹದ್ದಿನ ಮಂದಗೆರೆ ಹಾಗೂ ಸುತ್ತಮುತ್ತಲ ಗ್ರಾಮದ ಹೇಮಾವತಿ ನದಿ ಪಾತ್ರದ ಗ್ರಾಮಗಳಿಗೆ ಭೇಟಿ‌ ನೀಡಿ ವೀಕ್ಷಣೆ ಮಾಡಿ ಗೊರೂರು ಅಣೆಕಟ್ಟೆಯಿಂದ ಸುಮಾರು 1 ಲಕ್ಷ ಕ್ಯೂಸೆಕ್ಸ್ ಕ್ಕಿಂತ ಅಧಿಕ ನೀರನ್ನು ಹೇಮಾವತಿ ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ನದಿಗೆ ಇಳಿಯಬಾರದು. ಮೀನುಗಾರರು ಮೀನು ಹಿಡಿಯಲು ನದಿಗೆ ಹೋಗಬಾರದು. ಜಾನುವಾರುಗಳನ್ನು ನದಿ ಕಡೆ ಬಿಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಾಗಮಂಗಲ ಉಪ ವಿಭಾಗದ ಡಿ.ವೈ.ಎಸ್. ಪಿ ರವರಾದ ಶ್ರೀ ‌ವಿಶ್ವನಾಥ್ ರವರು, ಕಿಕ್ಕೇರಿ‌ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರಾದ ಶ್ರೀ ಚಂದ್ರಶೇಖರ್ ರವರು ಹಾಜರಿದ್ದರು.

Share this article

About Author

Super User