ಲಯನ್ಸ್ ಕ್ಲಬ್ ಮತ್ತು ಇನ್ನಿತರ ಸಂಘಟನೆಗಳ ವತಿಯಿಂದ ಬೃಹತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಬೆಂಗಳೂರಿನ ಲಯನ್ಸ್ ಕ್ಲಬ್ ಮತ್ತಿತರ ಸಂಘಟನೆಗಳ ಸಹಯೋಗದಲ್ಲಿ ಶ್ರೀರಂಗ ಚಿತ್ರ ಮಂದಿರದ ಆವರಣದಲ್ಲಿ ಆಯೋಜಿಸಲಾಗಿತ್ತು.ರೈತರ ಆರೋಗ್ಯದ ಬಗ್ಗೆ ಹೆಚ್ಚು ಆದ್ಯತೆ ನೀಡಿ ಅವರ ಆರೋಗ್ಯ ತಪಾಸಣೆ ಮಾಡಿ ,ಮೂಳೆ, ಕಣ್ಣು, ಚರ್ಮ , ಕಿವಿ ಮೂಗು ಗಂಟಲು ಸೇರಿದಂತೆ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡಿ ಉಚಿತವಾಗಿ ಮಾತ್ರೆಗಳ ಮತ್ತು ಔಷಧಿ, ಕನ್ನಡಕಗಳನ್ನು ನೀಡಲಾಯಿತು.ಮತ್ತು ಬಡ ರೈತರಿಗೆ ಉಚಿತವಾಗಿ ಕೃಷಿ ಪರಿಕರಗಳನ್ನು ವಿತರಣೆ ಮಾಡಿದರು.