ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸಾವನ್ನಪ್ಪಿದ್ದು ನಾಲ್ವರಿಗೆ ಗಾಯ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೌಡಗೆರೆ ಕ್ರಾಸ್ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸಾವನ್ನಪ್ಪಿದ್ದು ನಾಲ್ವರಿಗೆ ಗಾಯಗೊಂಡ ಘಟನೆ ಗೌಡಗೆರೆ ಕ್ರಾಸ್ ಬಳಿ ನಡೆದಿದೆ. ತಾಲ್ಲೂಕಿನ ಕೆಂಬೂತಗೆರೆ ಗ್ರಾಮದ ದಿನೇಶ್ (35) ಮೃತಪಟ್ಟ ದುದೈವಿ, ಸಂತೋಷ,ವಿನೋದ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ಸೇರಿಸಲಾಗಿದೆ. ಕಳೆದ ರಾತ್ರಿ ಒಂದು ಬೈಕ್ ನಲ್ಲಿ ಇಬ್ಬರು ಇನ್ನೊಂದು ಬೈಕ್ ನಲ್ಲಿ ಮೂವರು ಬರುತ್ತಿದ್ದು, ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ದಿನೇಶ್ ರಸ್ತೆ ಬದಿಯಲ್ಲಿರುವ ಕೆರೆಗೆ ಹಾರಿದ್ದು ತಲೆಗೆ ಪೆಟ್ಟು ಬಿದ್ದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಉಳಿದವರಿಗೆ ತೀವ್ರಗಾಯಗೊಂಡಿದ್ದು, ಮಳವಳ್ಳಿ ಸಾರ್ವಜನಿಕ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲುಮಾಡಿಕೊಂಡಿದ್ದಾರೆ.