Print this page

ಬೆಂಗಳೂರನಿಂದ ಹೊರಟ ವೀರ ಯೋಧ ಪಾರ್ಥಿವ ಶರೀರ .ಹುಟ್ಟೂರು ಗುಡಿಗೆರೆಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ವ್ಯವಸ್ಥೆ.

ವೀರ ಯೋಧ ಮಂಡ್ಯದ ಗುರು ಪಾರ್ಥಿವ ಶರೀರ ಬೆಂಗಳೂರಿಗೆ ಆಗಮನ .ಮಂಡ್ಯದ ಹುಟ್ಟೂರು ಗುಡಿಗೆರೆಗೆ ಕೊಂಡೊಯ್ಯಲಾಗುತ್ತದೆ.

ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಗುರುವಾರ ಸಂಭವಿಸಿದ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧ ಮಂಡ್ಯದ ಗುರು ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ತರಲಾಯಿತು.ಗುರು ಅವರ ಶರೀರವನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನವು ಮಧ್ಯಾಹ್ನ ಒಂದು ಗಂಟೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಮೊದಲಿಗೆ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದರು.ಇದಾದ ನಂತರ ಗುರು ಅವರ ಶರೀರವನ್ನು ರಸ್ತೆ ಮಾರ್ಗವಾಗಿ ಮಂಡ್ಯದ ಹುಟ್ಟೂರು ಗುಡಿಗೆರೆಗೆ ಕೊಂಡೊಯ್ಯಲಾಗುತ್ತದೆ. ಸದ್ಯ ಗುಡಿಗೆರೆಯಲ್ಲಿ ಯೋಧ ಗುರು ಅವರ ಅಂತ್ಯ ಸಂಸ್ಕಾರಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ  ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಗೂಡಿಗೆರೆಯಲ್ಲಿ ಇಂದು ಸಂಜೆ 6.10ಕ್ಕೆ ನಡೆಯಲಿದೆ.ಅಲ್ಲಿನ ಕೆ.ಎಂ. ದೊಡ್ಡಿ ಸಮೀಪದ ಮೆಳ್ಳಹಳ್ಳಿ ಬಳಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಮಾರು 10 ಗುಂಟೆ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಪೂರ್ವ-ಪಶ್ಚಿಮಕ್ಕೆ 6 ಅಡಿ, ಉತ್ತರ-ದಕ್ಷಿಣಕ್ಕೆ 9 ಅಡೊ ಅಳತೆಯ ವೇದಿಕೆ ನಿರ್ಮಾಣ ಮಾಡಲಾಗಿದೆ.ಸಿಮೆಂಟ್ ಇಟ್ಟಿಗೆಯಿಂದ ವೇದಿಕೆ ನಿರ್ಮಿಸಲಾಗಿದೆ. ಅದೇ ವೇದಿಕೆಯಲ್ಲಿ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ನೆರವೇರಲಿದೆ. ಹುತಾತ್ಮ ಯೋಧ ಗುರು ಅವರ ಪಾರ್ಥಿವ ಶರೀರಕ್ಕೆ ಸಹೋದರರು ಅಗ್ನಿ ಸ್ಪರ್ಶ ಮಾಡಲಿದ್ದಾರೆ. 


Share this article

About Author

Madhu