Print this page

35ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಕೆ.ಕಾಳೇಗೌಡ ಅವರಿಗೆ ಬೀಳ್ಕೊಡುಗೆ.

35ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾದ ಕೆ.ಆರ್.ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಕೆ.ಕಾಳೇಗೌಡ ಅವರಿಗೆ ಅಭಿನಂದನೆ ಬೀಳ್ಕೊಡುಗೆ.

ಕೆ.ಆರ್.ಪೇಟೆ : ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ ಸೇವೆ ಆರಂಬಿಸಿದ ಕಾಲೇಜಿನಲ್ಲಿಯೇ ಪ್ರಾಂಶುಪಾಲರಾಗಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾಗುತ್ತಿರುವ ಡಾ.ಕಾಳೇಗೌಡ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ವತಿಯಿಂದ ಆತ್ಮೀಯವಾಗಿ ಅಬಿನಂಧಿಸಿ ಬೀಳ್ಕೊಡಲಾಯಿತು.ಪ್ರಜಾವಾಣಿ ದಿನಪತ್ರಿಕೆಯ ವರದಿಗಾರರಾಗಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಸಾಹಿತಿಗಳಾಗಿ, ಲೇಖಕರಾಗಿ, ಜಿಲ್ಲಾ ಲೋಕಶಿಕ್ಷಣ ಇಲಾಖೆಯ ಅಧಿಕಾರಿಯಾಗಿ, ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಸಮಾಜದ ಎಲ್ಲಾ ಸ್ತರಗಳಲ್ಲಿಯೂ ಕಾರ್ಯನಿರ್ವಹಿಸಿ ತಾಲೂಕಿನಾಧ್ಯಂತ ಮನೆ ಮಾತಾಗಿ‌ ಜನಪ್ರಿಯರಾಗಿರುವ ಕಾಳೇಗೌಡರು ತಮ್ಮ 35ವರ್ಷಗಳ ವೃತ್ತಿಬದುಕಿನಲ್ಲಿ ಒಂದೇ ಒಂದು‌ ಕಪ್ಪುಚುಕ್ಕಿಯಿಲ್ಲದಂತೆ ಕೆಲಸ ಮಾಡಿ ಕರ್ತವ್ಯಕ್ಕೆ ಸೇರಿದ್ದ ಕಾಲೇಜಿನಲ್ಲಿಯೇ ನಿವೃತ್ತರಾಗುತ್ತಿರುವುದು ಸಂತಸ ತಂದಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ.ಅಂ.ಚಿ.ಸಣ್ಣಸ್ವಾಮಿಗೌಡ ಅಭಿಮಾನದಿಂದ ಹೇಳಿದರು. ಶ್ರೀಯುತರ ವಿಶ್ರಾಂತ ಜೀವನವು ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಎಸ್.ಕೃಷ್ಣಮೂರ್ತಿ, ಪ್ರಾಂಶುಪಾಲ ಲಿಂಗಣ್ಣಸ್ವಾಮಿ, ಸಮಿತಿಯ ಸದಸ್ಯರಾದ ಡಾ.ಕೆ.ಎಸ್.ರಾಜೇಶ್, ಎ.ಬಿ.ನಾಗೇಶ್, ವೆಂಕಟಗಿರಿಯಪ್ಪ, ಪ್ರಾಂಶುಪಾಲರಾದ ಎಂ.ಮಲ್ಲಿಕಾರ್ಜುನ, ಡಿ.ಬಿ.ಸತ್ಯ, ಜೆ.ಜಿ.ರಾಜೇಗೌಡ,ಉಪ ಪ್ರಾಂಶುಪಾಲ ಸೂರ್ಯನಾರಾಯಣ ಮತ್ತಿತರರು ಭಾಗವಹಿಸಿದ್ದರು.

Share this article

About Author

Madhu