Print this page

ಅಕ್ಕಿಹೆಬ್ಬಾಳು ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಸಮಗ್ರ ಕೃಷಿ ಅಭಿಯಾನ

ಅಕ್ಕಿಹೆಬ್ಬಾಳು ಹೋಬಳಿಯ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಸಮಗ್ರ ಕೃಷಿ ಅಭಿಯಾನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಲ್.ದೇವರಾಜು ಚಾಲನೆ ನೀಡಿದರು.ಬಳಿಕ ಮಾತನಾಡಿದ ದೇವರಾಜು ಅವರು ರೈತರು ತಮ್ಮ ಭೂಮಿಯ ಮಣ್ಣನ್ನು ತಪ್ಪದೇ ಪರೀಕ್ಷೆ ಮಾಡಿಸಿ ಕೊಳ್ಳಬೇಕು. ಮಣ್ಣಿನ ಗುಣಕ್ಕೆ ತಕ್ಕಂತೆ ಬೆಳೆಗಳನ್ನು ಭಿತ್ತನೆ ಮಾಡಬೇಕು. ರಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕು. ಸಾವಯವ ಬೇಸಾಯ ಮಾಡುವ ಮೂಲಕ ಮಣ್ಣಿನ ಆರೋಗ್ಯವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಹೋಗಿ ರೈತರಿಗೆ ಮಾಹಿತಿ ನೀಡಬೇಕು ಎಂದು ದೇವರಾಜು ಸಲಹೆ ನೀಡಿದರು.

ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಿಂಗೇಗೌಡ, ವಿನೂತಸುರೇಶ ಸತ್ಯಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ, ಉಪಾಧ್ಯಕ್ಷ ಎ.ಜೆ.ಕುಮಾರ್, ಕೃಷಿ ವಿಜ್ಞಾನಿಗಳಾದ ಡಾ.ಪ್ರವೀಣ್, ಡಾ.ಶ್ರೀನಿವಾಸ್ ಶೆಟ್ಟಿ, ಕೃಷಿಕ ಸಮಾಜದ ನಿರ್ದೇಶಕರಾದ ಎ.ಆರ್.ರಘು, ರಾಮಸ್ವಾಮಿ, ಲಕ್ಷ್ಮೇಗೌಡ, ಪ್ರಗತಿಪರ ರೈತರಾದ ನಾಗರಾಜು, ತಿಮ್ಮೇಗೌಡ, ಕೃಷಿ ಅಧಿಕಾರಿಗಳಾದ ಆನಂದ್ ಕುಮಾರ್, ಶ್ರೀಧರ್, ನಾಗರಾಜು, ಮಾನಸ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Share this article

About Author

Madhu