Print this page

ಧರ್ಮದ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ ನೆಮ್ಮದಿ.ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ

ಧರ್ಮದ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ ನೆಮ್ಮದಿ.ಸಮಾಜದಲ್ಲಿ ತುಳಿತಕ್ಕೊಳಗಾದವರು ಶಿಕ್ಷಣದ ಶಕ್ತಿ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬಂದು ಸಾಧನೆ ಮಾಡಬೇಕು.ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ.

ಕೃಷ್ಣರಾಜಪೇಟೆ: ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಲಕ್ಕಮ್ಮ ಲಕ್ಷ್ಮೀದೇವಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು. ಕನಕಗುರು ಪೀಠದ ಕೆ.ಆರ್.ನಗರ ಶಾಖಾ ಮಠದ ಶ್ರೀ ಶಿವಾನಂದ ಪುರಿ ಶ್ರೀಗಳ ದಿವ್ಯಸಾನಿಧ್ಯದಲ್ಲಿ  ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ. ಇಂದಿನ ಒತ್ತಡದ ಜೀವನದಲ್ಲಿ ದೇವರು  ಮತ್ತು ಧರ್ಮದ ಹಾದಿಯಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯಬಹುದು. ಹಾಲುಮತ ಕುರುಬ ಸಮಾಜದ ಬಂಧುಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ವಿದ್ಯಾವಂತರನ್ನಾಗಿ ಮಾಡುವ ಜೊತೆಗೆ ಉನ್ನತ ಶಿಕ್ಷಣವನ್ನು ಕೊಡಿಸಿ ಸಮಾಜದ ಮುಖ್ಯವಾಹಿನಿಗೆ ಬಂದು ಸಾಧನೆ ಮಾಡಿ ಮುನ್ನಡೆಯುವಂತೆ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯದ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ರಾಜ್ಯದ ಯಾವುದೇ ಹಳ್ಳಿಗಳಿಗೆ ಹೋದರೂ ನಮ್ಮ ತಂದೆಯವರನ್ನು ಗೌರವಿಸುತ್ತಾರೆ. ಅವರೂ ರಾಜ್ಯದ ಮುಖ್ಯಮಂತ್ರಿ ಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕೃಷ್ಣರಾಜಪೇಟೆ ತಾಲ್ಲೂಕಿನ ಜನತೆಯ ಪ್ರೀತಿ ವಿಶ್ವಾಸ ಕಂಡು ಹೃದಯ ತುಂಬಿ ಬಂದಿದೆ ಎಂದು ಯತೀಂದ್ರ ಅಭಿಮಾನದಿಂದ ಹೇಳಿದರು.

 ಶಾಸಕ ಡಾ.ನಾರಾಯಣಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಆದಿಹಳ್ಳಿ ಗ್ರಾಮವು ಪುಟ್ಟಗ್ರಾಮವಾಗಿದ್ದರೂ ಇಲ್ಲಿನ ಜನರ ಧಾರ್ಮಿಕ ಜಾಗೃತಿ ಹಾಗೂ ಶ್ರದ್ಧಾ ಭಕ್ತಿಯು ಎಲ್ಲರಿಗೂ ಮಾದರಿಯಾಗಿದೆ.ಗ್ರಾಮದಲ್ಲಿ ಮೂರು ದೇವಸ್ಥಾನಗಳನ್ನು ನಿರ್ಮಾಣ ಮಾಡಿ ಲೋಕಾರ್ಪಣೆ ಮಾಡಲಾಗುತ್ತಿದೆ. ಮಳೆಯಾಶ್ರಿತ ಪ್ರದೇಶವಾದ ಸಂತೇಬಾಚಹಳ್ಳಿ ಹೋಬಳಿಯ ಜನರು ಕಷ್ಠಜೀವಿಗಳಾಗಿದ್ದು ದುಡಿಮೆಯನ್ನೇ ದೇವರೆಂದು ನಂಬಿದ್ದಾರೆ. ಅಲ್ಲದೇ ಈ ನೆಲಕ್ಕೆ ಅದ್ಭುತವಾದ ಶಕ್ತಿಯಿದೆ. ಆದ್ದರಿಂದಲೇ ನಾನು ಕ್ಷೇತ್ರದ ಶಾಸಕನಾಗಿ ಎರಡನೇ ಅವಧಿಗೆ ಆಯ್ಕೆಯಾಗಿದ್ದೇನೆ. ಹೋಬಳಿಯ ಜನರು ಕಷ್ಟಜೀವಿಗಳಾಗಿದ್ದು. ಇಡೀ ನಾಗರಿಕ ಸಮಾಜವೇ ಮೆಚ್ಚುವಂತಹ ಕೆಲಸ ಮಾಡಿದ್ದಾರೆ ಎಂದು ಶಾಸಕರು ಆದಿಹಳ್ಳಿ ಗ್ರಾಮಸ್ಥರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ  ಕೆ.ಬಿ.ಚಂದ್ರಶೇಖರ್, ಜಿ.ಪಂ ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ತಾ.ಪಂ ಉಪಾಧ್ಯಕ್ಷ ಜಾನಕೀರಾಂ, ಸದಸ್ಯ ಮೋಹನ್, ಡಾಲು ರವಿ , ಕೆ.ಶ್ರೀನಿವಾಸ್, ರವೀಂದ್ರಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿರಮೇಶ್ ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.

Share this article

About Author

Madhu