Print this page

ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ಬ್ರಹ್ಮರಥೋತ್ಸವ.ಉತ್ಸವಮೂರ್ತಿಗೆ ಹೆಗಲುಕೊಟ್ಟಾ ಶಾಸಕ ಡಾ.ನಾರಾಯಣಗೌಡ.

ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ಬ್ರಹ್ಮರಥೋತ್ಸವ. ದೇವರ ಉತ್ಸವಮೂರ್ತಿಗೆ ಹೆಗಲುಕೊಟ್ಟು ಭಕ್ತಿಯ ಪರಾಕಾಷ್ಠೆ ಪ್ರದರ್ಶಿಸಿದ ಶಾಸಕ ಡಾ.ನಾರಾಯಣಗೌಡ. ಮುಗಿಲು ಮುಟ್ಟಿದ ಜಯಘೋಷಗಳು.ಗರುಡಪಕ್ಷಿಯಿಂದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಪ್ರದಕ್ಷಿಣೆ.

ಕೃಷ್ಣರಾಜಪೇಟೆ : ತಾಲ್ಲೂಕಿನ ಪುರಾಣ ಪ್ರಸಿದ್ಧ ಅಕ್ಕಿಹೆಬ್ಬಾಳು ಗ್ರಾಮದ ಗ್ರಾಮದೇವತೆ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಜರುಗಿತು.ಮಧ್ಯಾಹ್ನ 1ಗಂಟೆಗೆ ಸರಿಯಾಗಿ ಗರುಡ ಪಕ್ಷಿಯು ಆಗಸದಲ್ಲಿ ಕಾಣಿಸಿಕೊಂಡು ರಥದ ಸುತ್ತಲೂ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ವಿಪ್ರ ಬಾಂಧವರು ಉಘೇ ನರಸಿಂಹ.ಉಘೇ ಗೋವಿಂದ. ಗೋವಿಂದ ಎಂಬ ಜಯಘೋಷಗಳನ್ನು ಕೂಗುತ್ತಿದ್ದರು. ಭಕ್ತಿಯ ಪರಾಕಾಷ್ಠೆಯು ಮುಗಿಲು ಮುಟ್ಟಿತ್ತು.

ಶಾಸಕ ಡಾ.ನಾರಾಯಣಗೌಡ ಮತ್ತು ತಹಶೀಲ್ದಾರ್ ಎಂ.ಶಿವಮೂರ್ತಿ ಶ್ರೀಲಕ್ಷ್ಮೀನರಸಿಂಹಸ್ವಾಮಿಯವರ ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತಲೂ ಸದ್ಬಕ್ತರಂತೆ ಹೆಗಲಮೇಲೆ ಹೊತ್ತು ಮೆರೆದಿದ್ದು ವಿಶೇಷವಾಗಿತ್ತು.  ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ಶ್ರೀರಥದ ಕಳಸಕ್ಕೆ ಹಣ್ಣು ಜವನವನ್ನು ಸಮರ್ಪಿಸಿ ಕೃತಾರ್ಥರಾದರು.ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ಹೇಮಾವತಿ ಹೊನ್ನಾರು ಸಾಂಸ್ಕೃತಿಕ ವೇದಿಕೆಯ ವತಿಯಿಂದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಅವರ ನೇತೃತ್ವದಲ್ಲಿ ಬಿಗಿಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

 ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಲ್.ದೇವರಾಜು, ತಾಲ್ಲೂಕು ಪಂಚಾಯತ ಸದಸ್ಯೆ ವಿನುತಾಸುರೇಶ್, ಮಾಜಿಸದಸ್ಯೆ ರೇಣುಕಾಕಿಟ್ಟು, ಸ್ಥಳೀಯ ಮುಖಂಡರಾದ ಎ.ಆರ್.ರಘು, ಎ.ಎಸ್.ನಾಗರಾಜು, ಜಿ.ಪಂ ಮಾಜಿ ಉಪಾಧ್ಯಕ್ಷೆ ಗೌರಮ್ಮಶ್ರೀನಿವಾಸ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ಉದ್ಯೋಗಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕಿ ಮೇನಕಾದೇವಿ ಸೇರಿದಂತೆ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದರು.

Share this article

About Author

Madhu