Print this page

ಪಿ.ಎಲ್.ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಂಡಿಹೊಳೆ ನಾಗೇಶ್ ಅವಿರೋಧ ಆಯ್ಕೆ.

ಕೆ.ಆರ್.ಪೇಟೆ ಪಿ.ಎಲ್.ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಬಂಡಿಹೊಳೆ ನಾಗೇಶ್ ಅವಿರೋಧ ಆಯ್ಕೆ.

 ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಇಂದು ನಡೆದ ಚುನಾವಣೆಯಲ್ಲಿ ಬಂಡಿಹೊಳೆ ಗ್ರಾಮದ ಕಾಂಗ್ರೆಸ್ ಮುಖಂಡ ನಾಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಾಂಡವಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಜು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.ಅಧ್ಯಕ್ಷ ಸ್ಥಾನಕ್ಕೆ ಬಂಡಿಹೊಳೆ ನಾಗೇಶ್ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸದ ಕಾರಣ ಚುನಾವಣಾಧಿಕಾರಿ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು. ನೂತನ ಅಧ್ಯಕ್ಷರನ್ನು ಮಾಜಿಶಾಸಕ ಡಾ.ಕೆ.ಬಿ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಕೆ.ಆರ್.ರವೀಂದ್ರಬಾಬು, ಮುಖಂಡರಾದ ಚೇತನಾ ಮಹೇಶ್, ಹರಳಹಳ್ಳಿ ವಿಶ್ವನಾಥ, ಡಾ.ಕೆ.ಎಸ್.ಬಸವೇಗೌಡ, ಕೆ.ಬಿ.ರವಿ ಮತ್ತಿತರರು ಅಭಿನಂದಿಸಿದರು.

 

Share this article

About Author

Madhu