Print this page

ಕೃಷ್ಣರಾಜಪೇಟೆ ತಾಲ್ಲೂಕು ಕರವೇ ವತಿಯಿಂದ ಹುತಾತ್ಮರಾದ ಸೈನಿಕರ ಆತ್ಮಕ್ಕೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ.

ಜಮ್ಮುಕಾಶ್ಮೀರದ ಫುಲ್ವಾಮದಲ್ಲಿ ಉಗ್ರರು ನಡೆಸಿದ ನರಮೇಧವನ್ನು ಖಂಡಿಸಿದ ಕೃಷ್ಣರಾಜಪೇಟೆ ತಾಲ್ಲೂಕು ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ನೇತೃತ್ವದಲ್ಲಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ .

ಕೆ.ಆರ್.ಪೇಟೆ :ಜಮ್ಮುಕಾಶ್ಮೀರದ ಫುಲ್ವಾಮದಲ್ಲಿ ಉಗ್ರರು ನಡೆಸಿದ ನರಮೇಧವನ್ನು ಖಂಡಿಸಿದ ಕೃಷ್ಣರಾಜಪೇಟೆ ತಾಲ್ಲೂಕು ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಕರವೇ ಕಾರ್ಯಕರ್ತರು.ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮದ್ದೂರು ತಾಲ್ಲೂಕಿನ ಕೆ.ಎಂ ದೊಡ್ಡಿ ಕಾಲೋನಿಯ ಗುಡಗೇರಿಯ ಗುರು(33)ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಉಗ್ರರ ದಾಳಿಯಿಂದ ವೀರಮರಣವನ್ನಪ್ಪಿ ಹುತಾತ್ಮರಾದ ಸೈನಿಕರ ಆತ್ಮಕ್ಕೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಮರ್ಪಿಸಿದರು.ಬಳಿಕ ಮಾತನಾಡಿದ ತಾಲ್ಲೂಕು ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ಜಮ್ಮುವಿನ ಪುಲ್ವಾಮಾ ಪ್ರದೇಶದಲ್ಲಿ ಉಗ್ರರ ದಾಳಿಗೆ ಸಿಆರ್‌ಪಿಎಫ್‌ನ 42 ಯೋಧರು ಹುತಾತ್ಮರಾಗಿರುವುದು ಬಹಳ ವಿಷಾದನೀಯ. ಭಾರತ ದೇಶದಲ್ಲಿ ಪುನಃ ಆತಂಕಕಾರಿ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿರುವುದು ಕಳವಳಕಾರಿ ಸಂಗತಿ ಎಂದರು. ಪಾಪಿ ಪಾಕಿಸ್ತಾನದ ಕೆಟ್ಟ ಕೃತ್ಯವನ್ನು ಖಂಡಿಸಿ ಭಾರತ ಸರ್ಕಾರವು ಉಗ್ರರ ಸಂಹಾರಕ್ಕೆ ಮುಂದಾಗುವ ಮೂಲಕ ಜಮ್ಮುಕಾಶ್ಮೀರದಲ್ಲಿ ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿದರು.

 

Share this article

About Author

Madhu