ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ.
ಕೆ.ಆರ್.ಪೇಟೆ : ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪಕ್ಷವು ಇಂದು ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳ ವತಿಯಿಂದ. ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ತಾಲ್ಲೂಕು ಪಂಚಾಯಿತಿ ವೃತ್ತದಿಂದ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕರವೇ, ಜಯಕರ್ನಾಟಕ ಸಂಘಟನೆ, ಆಟೋ, ಟ್ಯಾಕ್ಸಿ ಚಾಲಕರ ಸಂಘದ ಪ್ರಮುಖ ಬೀದಿಗಳಲ್ಲಿ ಪಾದಾಯಾತ್ರೆ ಮೂಲಕ ತಾಲ್ಲೂಕು ಕಚೇರಿಯ ವರೆಗೆ ಮೆರವಣಿಗೆ ನಡೆಸಿದರು. ಪ್ರವಾಸಿ ಮಂದಿರ ವೃತ್ತ ದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರವಿರುದ್ದ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಕುರಿತು ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ಈ ಹಿಂದೆ ಯುಪಿಎ ಸರ್ಕಾರ ವಿದ್ದಾಗ ಸ್ವಲ್ಪ ಬೆಲೆ ಹೆಚ್ಚಳ ಮಾಡಿದರೂ ಸಹ ಇದೇ ಬಿಜೆಪಿ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ದ ವಿರುದ್ದ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿತ್ತು. ಈಗ ತಮ್ಮದೇ ಸರಕಾರ ಇದ್ದರೂ ಸಹ ಬೆಲೆ ಏರಿಕೆ ತಡೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಫಲರಾಗಿದ್ದಾರೆ. ಆಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಉತ್ಪನ್ನ ಬೆಲೆಏರಿಕೆ ಹೆಚ್ಚಾಗಿತ್ತುಆದರೆ ಈಗ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಉತ್ಪನ್ನ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಡಿಸೇಲ್ ದರ ಗಗನಕ್ಕೆ ಏರಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಇನ್ನಾದರೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಬೇಕು ಇಲ್ಲದಿದ್ದರೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ತಂತಾನೆ ಹೆಚ್ಚಾಗಲಿವೆ. ಹಾಗಾಗಿ ತಕ್ಷಣ ಡೀಸೆಲ್, ಪೆಟ್ರೋಲ್ ಬೆಲೆ ಇಳಿಕೆ ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಕೆ.ಬಿ.ಚಂದ್ರಶೇಖರ್ ಎಚ್ಚರಿಕೆ ನೀಡಿದರು.ಪ್ರತಿಭಟನೆಯ ನಂತರ ತಾಲ್ಲೂಕು ತಹಸೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಕೆ.ಎಸ್.ಕುಮಾರ್, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ಎಸ್.ವಿ.ವಿನಯ್, ಪಿ.ಕೆ.ಜಿ.ಮಹೇಶ್, ಕರವೇ ಉಪಾಧ್ಯಕ್ಷ ಕೆ.ಟಿ.ಶ್ರೀನಿವಾಸ್, ತಾಲ್ಲೂಕು ಕಾರ್ಯದರ್ಶಿ ಟೆಂಪೋ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವಿ.ಡಿ.ಹರೀಶ್, ಕಾಂಗ್ರೆಸ್ ಮುಖಂಡರಾದ ಕೆ.ಸಿ.ರಾಮಚಂದ್ರೇಗೌಡ, ಪುರಸಭಾ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಯರಂಗ, ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಉಪಾಧ್ಯಕ್ಷ ಎಸ್.ರವಿ, ಮಹಿಳಾ ಘಟಕದ ಅಧ್ಯಕ್ಷೆ ಮಧು, ಕಾರ್ಯಾಧ್ಯಕ್ಷೆ ಸರಸ್ವತಿ, ನಗರ ಘಟಕದ ಅಧ್ಯಕ್ಷೆ ಮಂಗಳಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.