Print this page

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಮಹಿಳಾ ದಿನಾಚರಣೆ.

ಕೆ.ಆರ್.ಪೇಟೆ ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಮಹಿಳಾ ದಿನಾಚರಣೆ.

ಹೆಣ್ಣು ಮಕ್ಕಳು ಅನ್ಯಾಯದ ವಿರುದ್ಧ ಹೋರಾಟ ನಡೆಸಿ, ಗುರಿಸಾಧನೆಯತ್ತ ಹೆಜ್ಜೆ ಹಾಕಲು ಮನ್ ಮುಲ್ ನಿರ್ದೇಶಕ ಅಂಬರೀಶ್ ಕರೆ.... ಕೃಷ್ಣರಾಜಪೇಟೆ ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ನೇತೃತ್ವದಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮನ್ ಮುಲ್ ನಿರ್ದೇಶಕ ಎಸ್.ಅಂಬರೀಶ್ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳೆಯರು ಇಂದು ಪುರುಷರಿಗೆ ಸರಿ ಸಮಾನರಾಗಿ ಕೆಲಸ ಮಾಡುತ್ತಾ ರಾಷ್ಟ್ರದ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಕಾಣಿಕೆಯನ್ನು ನೀಡುತ್ತಿದ್ದಾರೆ. ಆದರೂ ಪುರುಷ ಪ್ರಧಾನವಾದ ನಮ್ಮ ಸಮಾಜದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ದಬ್ಬಾಳಿಕೆಗಳು ನಿರಂತರವಾಗಿ ನಡೆಯುತ್ತಿವೆ. ಹೆಣ್ಣು ಮಕ್ಕಳು ಆತ್ಮವಿಶ್ವಾಸ ಹಾಗೂ ಧೈರ್ಯದಿಂದ ಅನ್ಯಾಯ, ಅಕ್ರಮಗಳು ಹಾಗೂ ದಬ್ಬಾಳಿಕೆಯನ್ನು ಎದುರಿಸಿ ಮುನ್ನಡೆದು ಸರ್ವಶ್ರೇಷ್ಠ ಸಾಧಕರಾಗಬೇಕು. ಶಿಕ್ಷಣದ ಜ್ಞಾನ ಹಾಗೂ ವೃತ್ತಿಕೌಶಲ್ಯವನ್ನು ಬಳಕೆ ಮಾಡಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಮನವಿ ಮಾಡಿದರು... ಪುರಸಭೆ ಅಧ್ಯಕ್ಷೆ ರತ್ನಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು... ಧರ್ಮಸ್ಥಳ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ಹರೀಶ್ ರಾವ್ ವಿಶೇಷ ಉಪನ್ಯಾಸ ನೀಡಿದರು.. ಪಟ್ಟಣ ಪೋಲಿಸ್ ಠಾಣೆಯ ಮಹಿಳಾ ಪೇದೆ ಶೋಭಾ, ಪ್ರಗತಿಪರ ಕೃಷಿ ಸಾಧಕಿ ಲಕ್ಷ್ಮೀದೇವಮ್ಮ, ಗೊರವಿ ಧೃವತಾರೆ ಸೇವಾ ಸಂಸ್ಥೆಯ ಪ್ರೇಮ, ವಿನಯಕುಮಾರ್ ಸುವರ್ಣ, ಸಮಾಜಸೇವಕ ಕೋಟೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ರವೀಂದ್ರಬಾಬು ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು...

Share this article

About Author

Super User