Print this page

ಜೋಡಿಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಪ್ರತಿಭಟನೆ....

ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿರುವ ಗುಂಡೇಗೌಡ ಲಲಿತಮ್ಮ ದಂಪತಿಗಳ ಕೊಲೆ ಪ್ರಕರಣದಲ್ಲಿ ಪಕ್ಕದ ಮನೆಯವನಾದ ಒಬ್ಬರಾದ ಯೋಗೇಶ್ ಅವರಿಂದ ಮಾತ್ರ ಈ ಜೋಡಿಕೊಲೆ ನಡೆದಿಲ್ಲ ಯೋಗೇಶ್ ಅವರೊಂದಿಗೆ ಹಲವಾರು ಜನರು ಈ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ಶಂಕೆ ಹಾಗೂ ಅನುಮಾನವಿದ್ದು ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಿ ತಪ್ಪಿತಸ್ಥರೆಲ್ಲರಿಗೂ ಶಿಕ್ಷೆಯನ್ನು ವಿಧಿಸಬೇಕು ಎಂದು ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್ ಅವರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿ ಕೆಲಕಾಲ ದಿಗ್ಬಂಧನ ವಿಧಿಸಿ ಆಕ್ರೋಶ ವ್ಯಕ್ತಪಡಿಸಿದರು... ಯೋಗೇಶ್ ಒಬ್ಬ ಅಮಾಯಕನಾಗಿದ್ದು ಈತನೊಬ್ಬನೇ ವಯಕ್ತಿಕ ದ್ವೇಷದಿಂದ ಕೊಲೆ ಮಾಡಿದ್ದಾನೆ ಎಂದರೆ ನಂಬಲು ಸಾಧ್ಯವಿಲ್ಲ..ಕೊಲೆಯಾಗಿರುವ ದಂಪತಿಗಳ ಬಳಿಯಿದ್ದ ಒಡವೆಗಳು ಮತ್ತು ಹಣವೂ ಕಾಣುತ್ತಿಲ್ಲ. ಆದ್ದರಿಂದ ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಪ್ರತಿಭಟನೆ ನಡೆಸಲು ಮುಂದಾದಾಗ ಜಿಲ್ಲಾ ಪಂಚಾಯತಿ ಸ್ಥಾಯಿಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು ಗ್ರಾಮಸ್ಥರನ್ನು ಸಮಾಧಾನಪಡಿಸಿ ಹದಿನೈದು ದಿನಗಳಲ್ಲಿ ಜೋಡಿಕೊಲೆ ಪ್ರಕರಣದ ಸಂಪೂರ್ಣ ವಿವರವನ್ನು ನೀಡುತ್ತಾರೆ, ಸಹಕರಿಸಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಗ್ರಾಮಸ್ಥರು ಕೈಬಿಟ್ಟರು...

Share this article

About Author

Super User