Print this page

ಉಗ್ರರ ಆತ್ಮಾಹುತಿ ದಾಳಿಗೆ ಬಸ್ಸಿನಲ್ಲಿದ್ದ 42 ಮಂದಿ ಸಿಆರ್‌ಪಿಎಫ್‌ ಯೋಧರು ಹುತಾತ್ಮ.ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ಕೃತ್ಯ!!

ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಉಗ್ರರ ಕೃತ್ಯ  ದಾಳಿಯಲ್ಲಿ 45 ಮಂದಿ ಗಾಯಗೊಂಡಿದ್ದು, 18 ಯೋಧರ ಸ್ಥಿತಿ ಗಂಭೀರ .78 ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯೋಧರು 100 ಮೀಟರ್ ದೂರಕ್ಕೆ ಹಾರಿತು ದೇಹ!

ಕೃತ್ಯ ನಡೆದಿದ್ದು ಹೇಗೆ?

ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‌ಪಿಎಫ್‌ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 42 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದಾರೆ.

ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದಾರೆ. ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದಾರೆ. ಆತ್ಮಾಹುತಿ ದಾಳಿಕೋರ ಬಸ್ಸಿಗೆ ಕಾರನ್ನು ಡಿಕ್ಕಿ ಹೊಡೆದ ಬಳಿಕ ಉಳಿದ ಬಸ್ಸುಗಳು ನಿಂತ ಕೂಡಲೇ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿದೆ. ವಿಪರೀತ ಮಂಜು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಶ್ರೀನಗರ ಹೆದ್ದಾರಿ ಕಳೆದ ಎರಡು ದಿನಗಳಿಂದ ಮುಚ್ಚಲ್ಪಟ್ಟಿತ್ತು.

ಜಮ್ಮು ಕಾಶ್ಮೀರದ ಉರಿ ಸೇನಾ ನೆಲೆಯ ಮೇಲೆ 2016ರ ಸೆಪ್ಟೆಂಬರ್ 18ರಂದು ನಾಲ್ವರು ಉಗ್ರರು ದಾಳಿ ನಡೆಸಿ 18 ಮಂದಿ ಯೋಧರನ್ನು ಹತ್ಯೆ ಮಾಡಿದ್ದರು. ಭಾರತೀಯ ಸೇನೆ ಸಮವಸ್ತ್ರ ಧರಿಸಿ ಅಕ್ರಮವಾಗಿ ಒಳ ನುಗ್ಗಿದ್ದ ಈ ಪಾಪಿಗಳು ಯೋಧರು ಮಲಗಿದ್ದಾಗ ದಾಳಿ ನಡೆಸಿ ಕೃತ್ಯ ಎಸಗಿದ್ದರು. ಇಲ್ಲಿಯವರೆಗೆ ದೇಶದ ಇತಿಹಾಸಲ್ಲಿ ಅತಿ ದೊಡ್ಡ ದಾಳಿ ಎಂಬ ಕುಖ್ಯಾತಿ ಗಳಿಸಿತ್ತು. ಈಗ ಇದಕ್ಕಿಂತಲೂ ಅತಿ ದೊಡ್ಡ ದಾಳಿ ನಡೆದಿದ್ದು ಉಗ್ರರ ಪಾಪಿ ಕೃತ್ಯಕ್ಕೆ ಅಮಾಯಕ 42ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.

Share this article

About Author

Madhu