Print this page

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ವಿಧಿವಶ

ತಮಿಳುನಾಡಿನ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಇನ್ನಿಲ್ಲ

ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ವೈದ್ಯರು ಸೋಮವಾರವೇ 24 ಗಂಟೆಗಳ ಕಾಲ ಯಾವ ಭರವಸೆಗಳನ್ನು ನೀಡೋದಕ್ಕೆ ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕರುನಾನಿಧಿ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸ್ಪಷ್ಟಪಡಿಸಿತ್ತು.

ಕಾವೇರಿ ಆಸ್ಪತ್ರೆಯ ಮುಂದೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಪೊಲೀಸ್ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದು, ಆಸ್ಪತ್ರೆಯ ಸುತ್ತಮುತ್ತ 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

Share this article

About Author

Madhu