Print this page

ಪ್ರಥಮ ಮಹಿಳಾ ಜಗದ್ಗುರು ಮಾತೆ ಮಹಾದೇವಿ ಲಿಂಗೈಕ್ಯ.

ಪ್ರಥಮ ಮಹಿಳಾ ಜಗದ್ಗುರು ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಲಿಂಗೈಕ್ಯ.

ಬೆಂಗಳೂರು:  ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ.ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾತೆ ಮಹಾದೇವಿ ಮಾರ್ಚ್ 13, 1946ರಂದು ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದರು. ಇವರ ಮೂಲ ಹೆಸರು ರತ್ನ ಆಗಿದ್ದು, ದೀಕ್ಷೆ ಪಡೆದ ಬಳಿಕ ಮಾತೆ ಮಹಾದೇವಿ ಎಂದು ಗುರುತಿಸಿಕೊಂಡಿದ್ದರು.ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.

 

Share this article

About Author

Madhu