ಇತ್ತೀಚಿಗಿನ ಸುದ್ದಿಗಳು
- 27/09/2019 in ಹಾಸನ
- 10/09/2019 in ಮಂಡ್ಯ
- 10/09/2019 in ಹಾಸನ
- 10/09/2019 in ಹಾಸನ
- 09/09/2019 in ಮಂಡ್ಯ
- 09/09/2019 in ರಾಜ್ಯಸುದ್ದಿ
- 04/09/2019 in ಮಂಡ್ಯ
- 04/09/2019 in ರಾಜ್ಯಸುದ್ದಿ
- 04/09/2019 in ರಾಜ್ಯಸುದ್ದಿ
- 03/09/2019 in ಮಂಡ್ಯ
- 03/09/2019 in ರಾಜ್ಯಸುದ್ದಿ
- 03/09/2019 in ಮಂಡ್ಯ
- 03/09/2019 in ಮಂಡ್ಯ
- 03/09/2019 in ರಾಜ್ಯಸುದ್ದಿ
- 03/09/2019 in ಮಂಡ್ಯ
ಸುದ್ದಿಜಾಲ
ಕಾಂಗ್ರೆಸ್ ಮುಖಂಡರ ಬೆಂಬಲವನ್ನು ಪಕ್ಷದ ಮುಖಂಡರು ತೀರ್ಮಾನಿಸುತ್ತಾರೆ. ಪಕ್ಷದ್ರೋಹಿಗಳಿಗೆ ಆ ಪಕ್ಷದ ಮುಖಂಡರು ಶಿಸ್ತುಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು. ದೇವೇಗೌಡರು ಬಹುತೇಕ ತುಮಕೂರಿನಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಅನಿತಾ ಕುಮಾರಸ್ವಾಮಿ ಇದೇ ವೇಳೆ ಹೇಳಿದರು. ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಸಂಜೆ ನಿಗದಿಯಾಗುತ್ತೆ. ಪ್ರಚಾರ ಶುರು ಮಾಡಿದ್ದೀವಿ, ಇಂದು ಮಳವಳ್ಳಿಯಲ್ಲಿ ನಿಖಿಲ್ ಪ್ರಚಾರ ಮಾಡ್ತಿದ್ದಾರೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದರು.
ಅಕಾಲಿಕ ಮರಣ ಹೊಂದಿದ ಗುತ್ತಿಗೆದಾರ ಎಂ ಎಸ್ ಕೃಷ್ಣ (ಭಗವಾನ್ಎಲೆಕ್ಟ್ರಿಕಲ್ಸ್) ರವರ ಪತ್ನಿ ಶಶಿಕಲಾ ರವರಿಗೆ ಗುತ್ತಿಗೆದಾರರ ಸಂಘದ ಕೇಂದ್ರ ಕರ್ಯಾಕಾರಿಣಿ ಸಮಿತಿ ಸದಸ್ಯರಾದ ಕೆಂಪರಾಜು.ಎನ್ ಮಳವಳ್ಳಿ ರವರು ಪರಿಹಾರದ ಚೆಕ್ ವಿತರಣೆ ಮಾಡಿದರು.
ಮಂಡ್ಯ : ತಾಲ್ಲೂಕಿನ ಶ್ರೀ ಭಗವಾನ್ಎಲೆಕ್ಟ್ರಿಕಲ್ಸ್ ನ ಎಂ.ಎಸ್.ಕೃಷ್ಣ ರವರು ಅಕಾಲಿಕವಾಗಿ ಮೃತಪಟ್ಟಿದ್ದರು ಇವರ ಕುಟುಂಬಕ್ಕೆ ವಿದ್ಯುತ್ ಗುತ್ತಿಗೆದಾರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ಸದ್ಯಸರಾದ ಕೆಂಪರಾಜು .ಎನ್ ಮಳವಳ್ಳಿ ರವರು ಎಂ.ಎಸ್.ಕೃಷ್ಣ ರವರ ಮರಣ ಪರಿಹಾರ ಚೆಕ್ ನ್ನು ಅವರ ಪತ್ನಿಯಾದ ಶಶಿಕಲಾ ರವರಿಗೆ ರಾಗಿಮುದ್ದನ ಹಳ್ಳಿಯ ಅವರ ಮನೆಯೆಲ್ಲಿ ಕೆಂದ್ರ ಸಮಿತಿಯ ಸದಸ್ಯರಾದ ಸಂಪತ್ ಕುಮಾರ್ ಸಲಹಾಸಮಿತಿ ಸದಸ್ಯರಾದ ದೇವಿಪ್ರಸಾದ್ ತಾಲ್ಲೂಕು ಅಧ್ಯಕ್ಷ ರಾದ ರಾಜು HS, ಕಾರ್ಯದರ್ಶಿ ರಮೇಶ್ SG, ಮಂಡ್ಯ ಜಿಲ್ಲೆಯ ಪದಾಧಿಕಾರಿಗಳು ಮತ್ತು ತಾಲ್ಲೂಕಿನ ಗುತ್ತಿಗೆದಾರರ ಸಮ್ಮುಖದಲ್ಲಿ ಕೆಂಪರಾಜ .ಎನ್ ಮಳವಳ್ಳಿ ರವರು ಪರಿಹಾರದ ಚೆಕ್ ಅನ್ನು ಅವರ ಪತ್ನಿ ಶಶಿಕಲಾ ರವರಿಗೆ ವಿತರಣೆ ಮಾಡಿದರು.
ಪರಿಸರ ಸಂರಕ್ಷಣೆಗೆ ನೀಡಿರುವ ಕೊಡುಗೆಗೆ ಮಾನ್ಯತೆ ನೀಡಿ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್, ಪರ್ವತಾರೋಹಿ ಬಚೇಂದ್ರಿ ಪಾಲ್, ಜಾನಪದ ಗಾಯಕಿ ತೀಜನ್ ಬಾಯಿ, ಪರಿಸರಪ್ರೇಮಿ, ಕರ್ನಾಟಕದ ಸಾಲು ಮರದ ತಿಮ್ಮಕ್ಕ ಸೇರಿದಂತೆ 54 ಗಣ್ಯರಿಗೆ 2019ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಧಾನ ಮಾಡಿದ್ದಾರೆ. ಈ ಹಿಂದೆ ಮಾರ್ಚ್ 11ರಂದು ವಿವಿಧ ಕ್ಷೇತ್ರದಲ್ಲಿ ಸಾಧಿಸಿದ 56 ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡಿ ರಾಷ್ಟ್ರಪತಿಗಳು ಗೌರವಿಸಿದ್ದರು. ಸಮಾಜ ಸೇವೆ ಮಾಡಿದಂತಹ ಶ್ರೀಮತಿ ಸಾಲುಮರದ ತಿಮ್ಮಕ್ಕರವರಿಗೆ ರಾಷ್ಟ್ರಪತಿ ಪದ್ಮಶ್ರೀ ಪುರಸ್ಕಾರವನ್ನು ಪ್ರದಾನ ಮಾಡಿದ್ದಾರೆ.
107 ನೇ ವಯಸ್ಸಿನ ಕರ್ನಾಟಕದ ಶ್ರೀಮತಿ ತಿಮ್ಮಕ್ಕರವರು ಒಬ್ಬ ಪರಿಸರವಾದಿ ಹಾಗೂ ತನ್ನ ಹಳ್ಳಿಯಾದ ಹುಲಿಕಲ್‍ನಿಂದ ಕುದೂರುವರೆಗಿನ 4 ಕಿ.ಮೀ ಹೆದ್ದಾರಿಯ ಉದ್ದಗಲಕ್ಕೂ ಆಲದ ಮರಗಳನ್ನು ನೆಟ್ಟು ಹೆಸರುವಾಸಿಯಾಗಿದ್ದಾರೆ.ಪರಿಸರದ ಮೇಲೆ ತಮಗಿರುವ ಪ್ರೀತಿಯಿಂದ ರಸ್ತೆ ಬದಿಗಳಲ್ಲಿ ಮರಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ನೀರುಣಿಸಿ ಪೋಷಿಸಿ ತಿಮ್ಮಕ್ಕನವರು ವೃಕ್ಷಮಾತೆಯಾದವರು. ಸಾಲುಮರದ ತಿಮ್ಮಕ್ಕ ಮೂಲಕ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರು. ಮಕ್ಕಳು ಇಲ್ಲವೆನ್ನುವ ಕಾರಣಕ್ಕೆ ರಸ್ತೆ ಬದಿಯ ಆಲದ ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ ಬೆಳೆಸಿ, ಪೋಷಿಸಿ ಪರಿಸರ ಉಳಿಸಿ ಎಂದು ಸಾರಿದ ವೃಕ್ಷಮಾತೆ. ಇದೇ ಕಾರಣಕ್ಕೆ ಅವರು ಸಾಲುಮರದ ತಿಮ್ಮಕ್ಕ ಎಂದು ಖ್ಯಾತಿ ಪಡೆದಿದ್ದಾರೆ.ಆದ್ರೆ ಇಳಿಯ ವಯಸಿನಲ್ಲೂ ತಿಮ್ಮಕ್ಕ ಅವರು ಮಾತ್ರ ಪರಿಸರ ರಕ್ಷಣೆ, ಕಾಳಜಿಯನ್ನು ಮರೆತಿಲ್ಲ. ಸ್ವಾರ್ಥವಿಲ್ಲದೆ ಪರಿಸರಕ್ಕಾಗಿ ಸೇವೆ ಸಲ್ಲಿಸಿದ ತಿಮ್ಮಕ್ಕ ಅವರ ಕಾರ್ಯವನ್ನು ಮೆಚ್ಚಿ ಈಗಾಗಲೇ ಹಲವು ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿಗಳು ಲಭಿಸಿದೆ. ಬಿಬಿಸಿ 2016 ರಲ್ಲಿ ಜಗತ್ತಿನ ಅತಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಕೂಡ ಸಾಲು ಮರದ ತಿಮ್ಮಕ್ಕ ಅವರು ಸ್ಥಾನ ಪಡೆದಿದ್ದಾರೆ.
ನಿಖಿಲ್ ಸ್ಪರ್ಧೆಯಿಂದ ಲಕ್ಷ್ಮಿ ಅಶ್ವಿನ್ ಗೌಡರಿಗೆ ಅನ್ಯಾಯವಾಗಿಲ್ಲ.ಐಆರ್‍ಎಸ್‍ನಿಂದ ಸ್ವಯಂ ನಿವೃತ್ತಿ ಪಡೆದಿದ್ದ ಲಕ್ಷ್ಮಿ ಅವರು ತಮ್ಮ ವೃತ್ತಿಗೆ ಮರಳುತ್ತಿದ್ದಾರೆ..ಸಿಎಂ
ಮಂಡ್ಯ: ಮಂಡ್ಯದ ಅಧಿಕೃತ ಅಭ್ಯರ್ಥಿ ಘೋಷಿಸಲು ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಮಾತನಾಡುತ್ತ, ನಾನು ಹುಟ್ಟಿದ್ದು ಹಾಸನದಲ್ಲಿ. ರಾಜಕೀಯವಾಗಿ ನನಗೆ ಜನ್ಮ ಕೊಟ್ಟಿದ್ದು ರಾಮನಗರದ ಜನತೆ. ರಾಜಕೀಯವಾಗಿ ನನ್ನನ್ನು ಹೆಮ್ಮರವಾಗಿ ಬೆಳೆಸಿದ್ದು ಮಂಡ್ಯದ ಜನತೆ. ಈ ಜನತೆಯ ಆಶೀರ್ವಾದದಿಂದ ನಾನು ಸಿಎಂ ಆಗಿದ್ದೇನೆ ಎಂದು ತಿಳಿಸಿ.ಲಕ್ಷ್ಮಿ ಅಶ್ವಿನ್ ಗೌಡರಿಗೆ ಮೋಸ ಮಾಡಿ ನಿಖಿಲ್‍ಗೆ ಟಿಕೆಟ್ ನೀಡಲಾಗಿದೆ ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಬಂದಿರೋದು ನನ್ನ ಗಮನಕ್ಕೆ ಬಂದಿದೆ. ಆದ್ರೆ ಹೆಚ್ಚಿನ ಜನರಿಗೆ ಹಿಂದಿನ ವಿಷಯ ಗೊತ್ತಿಲ್ಲ. ಮಳವಳ್ಳಿಯ ಜೆಡಿಎಸ್ ಅಧ್ಯಕ್ಷ ಕೆಂಚಪ್ಪನವರ ಪುತ್ರಿ, ನಾಗಮಂಗಲದ ಸೊಸೆ ಲಕ್ಷ್ಮಿ ಅಶ್ವಿನ್ ಗೌಡ ವಿಧಾನಸಭಾ ಚುನಾವಣಾ ಅಭ್ಯರ್ಥಿ ಆಗಬೇಕೆಂದು ಭೇಟಿ ಮಾಡಿದ್ದರು. ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ನೀಡಬೇಕೆಂದು ಮೊದಲ ಭೇಟಿಯಲ್ಲಿ ಮನವಿ ಮಾಡಿಕೊಂಡಿದ್ದರು. ಅಲ್ಲಿಂದಲೇ ನಮ್ಮ ಪರಿಚಯವಾಗಿತ್ತು ಎಂದರು.
ದೇವೇಗೌಡರ ಕುಟುಂಬ ಲಕ್ಷ್ಮಿ ಅಶ್ವಿನ್ ಗೌಡರಿಗೆ ಮೋಸ ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನಾವು ದೇವರನ್ನು ನಂಬಿಕೊಂಡು ಬದುಕುವ ಜೀವಿಗಳು. ಲಕ್ಷ್ಮಿ ಅವರ ಪತಿ ಐಆರ್‍ಎಸ್ ಅಧಿಕಾರಿಯಾಗಿದ್ದು, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬರುವಂತಹ ಕೆಲ ಸುದ್ದಿಗಳು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.ಸ್ವಯಂ ನಿವೃತ್ತಿ ಪಡೆದಿದ್ದ ಲಕ್ಷ್ಮಿ ಅಶ್ವಿನ್ ಗೌಡ ಮತ್ತೆ ತಮ್ಮ ಉದ್ಯೋಗಕ್ಕೆ ಹಾಜರಾಗಲು ಇಚ್ಛಿಸಿದ್ದಾರೆ. ಕಳೆದ ವಾರ ದೆಹಲಿಗೆ ಹೋದಾಗ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇನೆ. ಮತ್ತೊಮ್ಮೆ ಕೆಲಸಕ್ಕೆ ಸೇರಬೇಕೆಂದು ಕೇಳುತ್ತಿದ್ದು, ಅವಕಾಶ ನೀಡಿ ಎಂದು ಕೇಳಿಕೊಂಡಿದ್ದೇನೆ. ಆರು ತಿಂಗಳ ಹಿಂದೆ ನಾಲ್ಕು ವರ್ಷದ ಅವಧಿಗೆ ಲಕ್ಷ್ಮಿ ಅಶ್ವಿನ್ ಗೌಡರನ್ನು ನೇಮಿಸಲು ಪಕ್ಷ ಮುಂದಾಗಿತ್ತು. ರಾಜಕೀಯ ಅನುಭವದ ಆಗಬೇಕಾದ್ರೆ ಎಂಎಲ್‍ಸಿ ಗೆ ಅರ್ಜಿ ಸಲ್ಲಿಸಲು ತಂಗಿಗೆ ಹೇಳಿದ್ದಂತೆ ಸಲಹೆ ನೀಡಿದ್ದೆ. ನಮ್ಮ ಕುಟುಂಬದಿಂದ ಯಾವ ಮಹಿಳೆಗೂ ಅನ್ಯಾಯವಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.
ಕಳೆದ ಎರಡೂವರೆ ತಿಂಗಳಿನಿಂದ ಮಾಧ್ಯಮಗಳಲ್ಲಿ ಸುದ್ದಿಯನ್ನು ನೋಡಿ ಮನಸ್ಸಿಗೆ ತುಂಬಾ ನೋವಾಗಿದೆ. ಮಂಡ್ಯದಲ್ಲಿಯೇ ಈ ರೀತಿಯ ವಾತಾವರಣ ನಿರ್ಮಾಣ ಆಗುತ್ತೆ ಅಂದುಕೊಂಡಿರಲಿಲ್ಲ. ನಿಖಿಲ್ ಕುಮಾರಸ್ವಾಮಿಯನ್ನು ಉಪಚುನಾವಣೆ ನಿಲ್ಲಿಸಬೇಕೆಂದು ರವೀಂದ್ರ ಶ್ರೀಕಂಠಯ್ಯ ಎಂದು ಹೇಳಿದಾಗ ನನಗೆ ಒಂದು ಕ್ಷಣ ನಡುಕ ಉಂಟಾಯಿತು. ಇಂದು ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಮನಸ್ಸು ನನಗಿರಲಿಲ್ಲ. ಆದ್ರೆ ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ ಚುನಾವಣೆಗೆ ನಿಂತಿದ್ದಾನೆ. ಮಾಧ್ಯಮಗಳಲ್ಲಿ ಕಳೆದ ಎರಡ್ಮೂರು ತಿಂಗಳಿನಿಂದ ಮಂಡ್ಯ ಕ್ಷೇತ್ರದ ಸಂಚಿಕೆಗಳನ್ನು ಪ್ರಸಾರ ಮಾಡಲಾಗುತ್ತಿದ್ದು, ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ ಎಂದರು.
ಪ್ರಥಮ ಮಹಿಳಾ ಜಗದ್ಗುರು ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಲಿಂಗೈಕ್ಯ.
ಬೆಂಗಳೂರು: ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ.ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾತೆ ಮಹಾದೇವಿ ಮಾರ್ಚ್ 13, 1946ರಂದು ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದರು. ಇವರ ಮೂಲ ಹೆಸರು ರತ್ನ ಆಗಿದ್ದು, ದೀಕ್ಷೆ ಪಡೆದ ಬಳಿಕ ಮಾತೆ ಮಹಾದೇವಿ ಎಂದು ಗುರುತಿಸಿಕೊಂಡಿದ್ದರು.ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.
ಸಾಲಬಾಧೆ ತಾಳಲಾರದೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ.ಖಾಸಗಿ ಬ್ಯಾಂಕುಗಳು ಕಿರುಕುಳ ಹಿಂಸೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ.
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಡಿಂಕಾ ಗ್ರಾಮದಲ್ಲಿ ಸಾಲಬಾಧೆ ಖಾಸಗಿ ಬ್ಯಾಂಕುಗಳು ಕಿರುಕುಳ ಹಿಂಸೆ ತಾಳಲಾರದೆ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .ಡಿಂಕಾ ಗ್ರಾಮದಲ್ಲಿ ವಾಸ ಮಾಡಿಕೊಂಡು ಕೂಲಿ ಮಾಡುತ್ತಿದ್ದ ಶಿವಕುಮಾರ್ ಇವರ ಹೆಂಡತಿಯಾದ ರುದ್ರಮ್ಮ (53) ನೇಣು ಬಿಗಿದುಕೊಂಡು ಸಾವಿಗೀಡಾದ ದುರ್ದೈವಿ.ಗ್ರಾಮಶಕ್ತಿ ಬ್ಯಾಂಕ್ ನಲ್ಲಿ 50 ಸಾವಿರ , ಫ್ಯೂಚರ್ ಪ್ರವೇಟ್ ಲಿಮಿಟೆಡ್ 50 ಸಾವಿರ, ಮತ್ತು ಕೈ ಸಾಲ 2ಲಕ್ಷ , ಸೇರಿದಂತೆ ಸಾಲ ಮಾಡಿದ್ದರು.
ಘಟನೆಯ ವಿವರ :
ಕೂಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ರುದ್ರಮ್ಮ ಗ್ರಾಮಶಕ್ತಿ ಬ್ಯಾಂಕ್ ನಲ್ಲಿ 50 ಸಾವಿರ , ಫ್ಯೂಚರ್ ಪ್ರವೇಟ್ ಲಿಮಿಟೆಡ್ 50 ಸಾವಿರ, ಮತ್ತು ಕೈ ಸಾಲ 2ಲಕ್ಷ ಸಾಲ ಮಾಡಿದ್ದರು. ಕೂಲಿ ಕೆಲಸ ಮಾಡಿಕೊಂಡು ಬಂದ ಹಣದಲ್ಲಿ ಜೀವನ ಮಾಡುವುದಕ್ಕೆ ಸಾಲದೆ ಮಾಡಿದ ಸಾಲ ತೀರಿಸಲು ಕಷ್ಟವಾದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದು. ಖಾಸಗಿ ಬ್ಯಾಂಕ್ ಫ್ಯೂಚರ್ ಪ್ರವೇಟ್ ಲಿಮಿಟೆಡ್ ಮತ್ತು ಗ್ರಾಮಶಕ್ತಿ ಬ್ಯಾಂಕಿನ ಸಿಬ್ಬಂದಿ ಗಳು ದಿನನಿತ್ಯ ಮನೆಯ ಬಳಿ ಬಂದು ಕಿರುಕುಳ ಕೊಡುತ್ತಿದ್ದರು .ಸಾಲ ತೀರಿಸುವುದಾಗಿ ರುದ್ರಮ್ಮ ಹೇಳಿ ಸ್ವಲ್ಪ ದಿನಗಳ ಕಾಲಾವಕಾಶ ಕೇಳಿದರು. ಕೇಳದೆ ಬ್ಯಾಂಕಿನವರು ದಿನ ನಿತ್ಯ ಮನೆ ಹತ್ತಿರ ಮತ್ತು ಕೆಲಸ ಮಾಡುತ್ತಿರುವ ಹೊಲದ ಹತ್ತಿರ ಬಂದು ಕಿರುಕುಳ ಕೊಡುತ್ತಿದ್ದರೂ ಕಿರುಕುಳದ ಹಿಂಸೆಯನ್ನು ತಾಳಲಾರದೆ ಇಂದು ಬೆಳಿಗ್ಗೆ 12 ಗಂಟೆಯಲ್ಲಿ ತಮ್ಮ ಜಮೀನಿನ ಬಳಿ ಹೋಗಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ.ತುಂಬಾ ಕಡು ಬಡವರಾಗಿದ್ದು ರುದ್ರಮ್ಮನ ಮಗನಾದ ಮಲ್ಲಿಕಾರ್ಜುನ ಘಟನೆಯ ಮಾಹಿತಿಯನ್ನು ತಿಳಿಸಿದ್ದಾರೆ .ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಒಂದೇ ಒಂದು ಲೋಕಸಭೆ ಕ್ಷೇತ್ರದಲ್ಲಿ ಹಲವು ಹಂತಗಳಲ್ಲಿ ಮತದಾನ ,ಇತಿಹಾಸದಲ್ಲಿ ಇದೇ ಮೊದಲು!
ನವದೆಹಲಿ: ಸಾಮಾನ್ಯವಾಗಿ ಯಾವುದೇ ಒಂದು ರಾಜ್ಯದಲ್ಲಿ ಹಲವು ಹಂತಗಳಲ್ಲಿ ಮತದಾನ ನಡೆಯುತ್ತದೆ. ಆದರೆ, ಒಂದೇ ಒಂದು ಲೋಕಸಭೆ ಕ್ಷೇತ್ರದಲ್ಲಿ ಹಲವು ಹಂತಗಳಲ್ಲಿ ಮತದಾನ ನಡೆಯುವುದನ್ನು ನಾವು ಕೇಳಿರಲು ಸಾಧ್ಯವೇ ಇಲ್ಲ. ಭಾರತೀಯ ಚುನಾವಣಾ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ಒಂದು ಘಟನೆಗೆ ಈ ಲೋಕಸಭೆ ಚುನಾವಣೆ ಸಾಕ್ಷಿಯಾಗಲಿದೆ.
ಭದ್ರತೆಯ ಕಾರಣದಿಂದಾಗಿ ಅತ್ಯಂತ ಸೂಕ್ಷ್ಮ ಲೋಕಸಭೆ ಕ್ಷೇತ್ರವಾಗಿರುವ ಅನಂತನಾಗ್ ಕ್ಷೇತ್ರದಲ್ಲಿ ಮೂರು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಸಲಾಗುತ್ತಿದೆ. ಇಲ್ಲಿ ಚುನಾವಣೆ ನಡೆಸುವುದು ಎಷ್ಟು ಸವಾಲಿನ ಕೆಲಸ ಎಂಬುದನ್ನು ನೀವು ಊಹಿಸಬಹುದು. ಇದೇ ಕಾರಣದಿಂದಾಗಿಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ.
ಅನಂತನಾಗ್ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 16 ವಿಧಾನಸಭೆ ಕ್ಷೇತ್ರಗಳಿದ್ದು, ಅನಂತನಾಗ್, ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳನ್ನು ಒಳಗೊಂಡಿದೆ. ಈ ಜಿಲ್ಲೆಗಳಲ್ಲಿ ಪ್ರತ್ಯೇಕತಾವಾದಿಗಳ ಚಟುವಟಿಕೆ ಹೆಚ್ಚಿದೆ. ಜತೆಗೆ ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ಸಿಆರ್ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅನಂತನಾಗ್ ಲೋಕಸಭೆ ಕ್ಷೇತ್ರದಲ್ಲಿ ಏಪ್ರಿಲ್ 23, ಏಪ್ರಿಲ್ 29 ಮತ್ತು ಮೇ 6 ರಂದು ಮತದಾನ ನಡೆಯಲಿದೆ.
ಇದನ್ನು ಹೊರತುಪಡಿಸಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಜಮ್ಮು ಕ್ಷೇತ್ರಗಳಲ್ಲಿ ಏಪ್ರಿಲ್ 11 ರಂದು, ಶ್ರೀನಗರ ಮತ್ತು ಉಧಮ್ಪುರ ಕ್ಷೇತ್ರಗಳಲ್ಲಿ ಏಪ್ರಿಲ್ 18 ರಂದು ಮತ್ತು ಲಡಾಕ್ ಕ್ಷೇತ್ರದಲ್ಲಿ ಮೇ 6 ರಂದು ಮತದಾನ ನಡೆಯಲಿದೆ.ಭಾನುವಾರ ಸಂಜೆ ಸುನಿಲ್ ಅರೋರಾ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಲೋಕಸಭೆ ಕ್ಷೇತ್ರದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಘೋಷಿಸಿದ್ದರು.